Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಘಟಕ ಪ್ರಧಾನಿಯಿಂದ ಉದ್ಘಾಟನೆ

Advertisement
ಕೋಲಾರ : ರಾಜ್ಯದ ಕೋಲಾರ ಜಿಲ್ಲೆಯು ಇದೀಗ ರಾಷ್ಟ್ರಮಟ್ಟದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ.

ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ