Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ :ಸಿದ್ದರಾಮಯ್ಯ 

Advertisement
ಯಾದಗಿರಿ : ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ 'ಆರೋಗ್ಯ ಆವಿಷ್ಕಾರ' ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, 'ಸುಳ್ಳೇ ಬಿಜೆಪಿಯ ಮನೆ ದೇವರು.

ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371 ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವ್ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು' ಎಂದರು.

'ನಾವು ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ' ಎಂದರು.

'ಜಿಎಸ್​ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ