ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ನಗರಕ್ಕೆ ಪ್ರಧಾನಿ ಮಂತ್ರಿ ಅವರು ಆಗಮಿಸಲಿದ್ದಾರೆ.
ಅದೇ ದಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಲಿರುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

