Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಸಿಎಂ ಡಿ.ಕೆ ಶಿವಕುಮಾರ್ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ 

Advertisement

ಬೆಂಗಳೂರು : ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಇಂದು (ಜೂನ್ 3, 2026) ರಾಜ್ಯದ 34ನೇ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

ಸಂಜೆ ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಇದರೊಂದಿಗೆ ಕಳೆದ ವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯೊಂದಿಗೆ ಆರಂಭವಾಗಿದ್ದ ಸುಗಮ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಪ್ರಧಾನಿ ಮೋದಿಯವರ ಸಂದೇಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ” ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ. ಎಂದು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST