Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೋಜ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಂತಾಪ

Advertisement
ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮನೋಜ್ ಕುಮಾರ್ ಅವರು ತಮ್ಮ 87ನೇ ವಯಸ್ಸಿನಲ್ಲಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು. ಅವರ ನಿಧನಕ್ಕೆ ಮನರಂಜನಾ ಉದ್ಯಮದಿಂದ ಹಿಡಿದು ರಾಜಕೀಯವರೆಗೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ: ಪಿಎಂ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ, ''ಪ್ರಸಿದ್ಧ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಇಂಡಿಯನ್​ ಸಿನಿಮಾದ ಐಕಾನ್​ ಆಗಿದ್ದರು. ವಿಶೇಷವಾಗಿ ಅವರ ದೇಶಭಕ್ತಿಯ ಸಿನಿಮಾ ಉತ್ಸಾಹಕ್ಕಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಮನೋಜ್ ಅವರ ಕೆಲಸಗಳು ರಾಷ್ಟ್ರೀಯ ಹೆಮ್ಮೆಯ ಚೈತ್ಯನ್ಯವನ್ನು ಸೃಷ್ಟಿಸಿದೆ ಮತ್ತು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಆಲೋಚನೆಗಳಿವೆ. ಓಂ ಶಾಂತಿ'' ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರಪತಿ ಮುರ್ಮು ಟ್ವೀಟ್: ''ಪ್ರಸಿದ್ಧ ನಟ ಮತ್ತು ಫಿಲ್ಮ್ ಮೇಕರ್ ಮನೋಜ್ ಕುಮಾರ್ ಜಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಭಾರತೀಯ ಚಿತ್ರರಂಗದಲ್ಲಿ ಸಾಧನೆಗೈದು ಹೊರಟರು. ಸುದೀರ್ಘ ಮತ್ತು ವಿಶಿಷ್ಟ ವೃತ್ತಿಜೀವನದಲ್ಲಿ, ದೇಶಭಕ್ತಿಯ ಭಾವನೆಯನ್ನು ಉತ್ತೇಜಿಸುವಂತಹ ಚಲನಚಿತ್ರಗಳಿಗೆ ಹೆಸರುವಾಸಿಯಾದರು. ಅವರು ಜೀವ ತುಂಬಿದ ರಾಷ್ಟ್ರೀಯ ನಾಯಕರು, ರೈತರು ಮತ್ತು ಸೈನಿಕರ ಪಾತ್ರಗಳು ನಮ್ಮ ಸ್ಮರಣೆಯಲ್ಲಿ ಉಳಿಯಲಿದೆ. ಅವರ ಸಿನಿಮಾಗಳು ರಾಷ್ಟ್ರೀಯ ಹೆಮ್ಮೆಯನ್ನು ಹುಟ್ಟುಹಾಕುತ್ತವೆ ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ'' ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ