LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ

Advertisement
ರಾಯಬಾಗ: ಸಂಸದೆಯಾಗಿ ಒಂದು ವರ್ಷದ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು 25 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು.



ಚಿಕ್ಕೋಡಿ ಲೋಕಸಭೆ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಎಸಿಪಿ, ಟಿಎಸ್‌ ಪಿ ಯೋಜನೆಯಡಿ ಎಸ್ಸಿ ಕಾಲೋನಿಯಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಬೇಕೆಂಬ ಉದ್ಧೇಶದಿಂದ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದ ಅವರು, ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಕ್ರೀಡಾಪಟುಗಳು ರಾಷ್ಟ್ರೀಯ-ಅಂತರಾಷ್ಟ್ರೀ ಮಟ್ಟದಲ್ಲಿ ಮಿಂಚಲು ಅನುಕೂಲವಾಗಲಿದೆ.



ಹಿರಿಯರ ಮಾರ್ಗದರ್ಶನ ಪಡೆದು, ಕ್ರೀಡೆಗೆ ಬೇಕಾಗುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮತದಾರರ ಆಶೀರ್ವಾದಿಂದ ಮೊದಲ ಸಲ ಚಿಕ್ಕೋಡಿ ಕ್ಷೇತ್ರದಿಂದ ಸಂಸದೆಯಾಗಿರುವೆ.

ಈ ಭಾಗದ ಮನೆ ಮಗಳಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಹೀಗಾಗಿ ಕ್ರೀಡಾ, ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಪಡಿಸಲು ನಿರಂತರ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ರಾಯಬಾಗ ವಿಧಾನಸಭಾ ಕ್ಷೇತ್ರದ ನಸಲಾಪುರ, ಬಾವನ-ಸವದತ್ತಿ, ನಸಲಾಪೂರ, ಕರೋಶಿ ಬಂಬಲವಾಡ ಗ್ರಾಮಗಳಲ್ಲಿ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ನಿರ್ಮಾಣಕ್ಕೆ ತಲಾ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಹಾಗೂ 3 ಕೋಟಿ ರೂ. ವೆಚ್ಚದಲ್ಲಿ ಬಂಬಲವಾಡದಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿವರೆಗೆ ಕುಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೋಹಿತೆ, ಮುಖಂಡರಾದ ರಾಮಪ್ಪ ಪೂಜಾರಿ, ಸುರೇಶ ಶಾಮ್ ರೇವಡೆ, ಶಂಕರ್ ಗೌಡ ಪಾಟೀಲ್ , ವೃಷಭ ಪಾಟೀಲ್ , ವಿನಯ ಕುಂಬಾರ , ರುದ್ರಪ್ಪ ಸಂಗಪ್ಪಗೊಳ , ರಾಜು ಕೊಟ್ಟಿಗೆ , ಅರುಣ ನರಗುಂದೆ, ಶಿವು ಪಾಟೀಲ, ಕೃಷ್ಣ ಜುಗಳೆ, ಸಂಜಯ್ ಕಾಂಬ್ಳೆ, ಚೇತನ್ ಹೊನ್ನಗೊಳ ಹಾಗೂನ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ