LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನಾನು ಸದಾ ಸಿದ್ದ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Advertisement
--ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಕುಮಾರಿ ಪ್ರಿಯಾಂಕ ಜಾರಕಿಹೊಳಿ

                                                            ಅವರ ನಿವೇದನೆ, ಪ್ರಿಯ ಮತದಾರ ಪ್ರಭುಗಳೇ,

--------------ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ವರ್ಷ ಪೂರ್ಣ

-------------------------ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ- ಸಹಕಾರಕ್ಕೆ ಅಭಿನಂದನೆಗಳು  

ಚಿಕ್ಕೋಡಿ: ನನ್ನನ್ನು ನಿಮ್ಮ ಪ್ರತಿನಿಧಿಯಾಗಿ ಆಯ್ಕೆಮಾಡಿ, ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿ ಈಗ ಒಂದು ವರ್ಷ ಪೂರ್ಣವಾಗಿದೆ. ಈ ಅವಧಿಯಲ್ಲಿ ನಿಮ್ಮ ವಿಶ್ವಾಸ ಮತ್ತು ಸಹಕಾರಕ್ಕಾಗಿ ನಾನು ಹೃತ್ಪೂರ್ವಕವಾಗಿ ಕೃತಜ್ಞಳು.

ಈ ಒಂದು ವರ್ಷದಲ್ಲಿ ನಮ್ಮ ಕ್ಷೇತ್ರದ ಅಭಿವೃದ್ಧಿ, ರಾಜ್ಯ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಸಕ್ರಿಯವಾಗಿ ಕೆಲಸ ಮಾಡಲು ನನಗೆ ಅವಕಾಶ ಕಲ್ಪಿಸಿದ್ದೀರಿ. ನಿಮ್ಮ ಎಲ್ಲರ ಸಹಯೋಗದೊಂದಿಗೆ ಶಿಕ್ಷಣ, ಆರೋಗ್ಯ, ರೋಡು-ರೈಲು ಸೌಕರ್ಯ, ಕೃಷಿ, ಉದ್ಯೋಗ ಸೃಷ್ಟಿ, ಮಹಿಳಾ-ಯುವಜನ ಸಬಲೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಗತಿಗಾಗಿ ನಿರಂತರ ಶ್ರಮಿಸುತ್ತಿದ್ದೇನೆ.

ಮುಂದಿನ ದಿನಗಳಲ್ಲಿ ನಮ್ಮ ಚಿಕ್ಕೋಡಿ ಕ್ಷೇತ್ರವು ಸಮೃದ್ಧಿ, ಸಮಾಧಾನ ಮತ್ತು ಅಭಿವೃದ್ಧಿಯ ದಿಶೆಯಲ್ಲಿ ಮುನ್ನಡೆಯಲು ನನ್ನ ಪ್ರಯತ್ನಗಳು ಹೆಚ್ಚು ತೀವ್ರಗೊಳ್ಳುತ್ತವೆ. ನಿಮ್ಮ ಸಲಹೆಗಳು, ಸೂಚನೆಗಳು ಮತ್ತು ಬೆಂಬಲ ನನಗೆ ಶಕ್ತಿ ನೀಡುತ್ತದೆ. ಒಗ್ಗಟ್ಟಿನಿಂದ ಕೆಲಸ ಮಾಡಿ, ನಮ್ಮ ಪ್ರದೇಶಕ್ಕೆ ಹೆಚ್ಚಿನ ಸಾಧನೆಗಳನ್ನು ತರೋಣ.

ನಿಮ್ಮ -ಪ್ರಿಯಾಂಕಾ ಜಾರಕಿಹೊಳಿ
ಸಂಸದೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರ.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ