LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ 

Advertisement

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಇದೇ ವೇಳೆ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಹಾಗೂ ಜಾರಕಿಹೊಳಿ ಆಪ್ತರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಬಕಾರಿ ಪರವಾನಗಿ ಹಗರಣಕ್ಕೆ ಸಂಬಂಧಿಸಿದಂತೆ ಹಾಗೂ ವಿದೇಶಿ ಅಕ್ರಮ ಹಣ, ಹವಾಲಾ ಜಾಲದ ನಂಟು ಅನುಮಾನದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಇಂದು ಮುಂಜಾನೆಯೇ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 ಅತ್ತ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿರುವ ಮನೆ, ಕಚೇರಿ ಮಗಳು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಚೇರಿ, ಮಗ ರಾಹುಲ್ ಜಾರಕಿಹೊಳಿಗೆ ಸೇರಿದ ಜಾಗಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಬಾಮೈದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮನೆ ಮೇಲೆ ಎರಡನೇ ಬಾರಿ ಇಡಿ ದಾಳಿ ನಡೆದಿದೆ. ಕಳೆದ ಜೂನ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಮಂಜುನಾಥ್ ಅವರ ಮನೆ, ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಪ್ರದೇಶಗಳಲ್ಲಿ ಇಡಿ ಸುದೀರ್ಘ ದಾಳಿ ನಡೆಸಿತ್ತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್