Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿ.ಪಂ. ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ ಅವರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ

Advertisement
ಶ್ರೀ ರವಿ ಬಂಗಾರೆಪ್ಪನವರ ಮಾನ್ಯ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ ಬೆಳಗಾವಿ ರವರ ಅಧ್ಯಕ್ಷತೆಯಲ್ಲಿ ಸವದತ್ತಿ ತಾಪಂ ಸಭಾ ಭವನದಲ್ಲಿ ಶನಿವಾರ ಮನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು.



ಶ್ರೀ ರವಿ ಬಂಗಾರೆಪ್ಪನವರ ಮಾನ್ಯ ಯೋಜನಾ ನಿರ್ದೇಶಕರು ರವರು ಮಾತನಾಡಿ ಮನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ನಿರಂತರವಾಗಿ ಕೆಲಸವನ್ನು ನೀಡಬೇಕು. ಗ್ರಾಮ‌ ಪಂಚಾಯತಿಯವರಿಗೆ ನೀಡಿದ ಮಾನವ ದಿನಗಳ ಗುರಿಯನ್ನು ನಿಗದಿತ ಸಮಯದಲ್ಲಿ ಸೃಜನೆಯನ್ನು ಮಾಡುವುದು. ಹಾಗೂ ಮನರೇಗಾ ಯೋಜನೆಯಡಿ ಕೈಗೊಂಡು ಮುಕ್ತಾಯಗೊಂಡ ಕಾಮಗಾರಿಗಳನ್ನು ಕೂಡಲೇ MIS ದಲ್ಲಿ Work Completion ಮಾಡುವುದು, ಮನರೇಗಾ ಯೋಜನೆಯಡಿ ಕೈಗೊಂಡು ಅಪೂರ್ಣವಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸುವಂತೆ ಸೂಚನೆಯನ್ನು ನೀಡಿದರು. ಕೂಸಿನ ಮನೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುಂತೆ ಸೂಚನೆಯನ್ನು ನೀಡಿದರು.



ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲ ಜಲ ಮೂಲಗಳನ್ನು ಹಾಗೂ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಶುದ್ದ ಕುಡಿಯುವ ನೀರನ್ನು ಪೂರೈಸುವಂತೆ ಸೂಚನೆಯನ್ನು ನೀಡಿದರು.

ಸ್ವಚ್ಛಭಾರತ, ಸಾಮಾಜಿಕ ಲೆಕ್ಕ ಪರಿಶೋಧನೆ, ಕೂಸಿನ ಮನೆ, ಎನ್ ಆರ್ ಎಲ್‌ಎಮ್, ಜೆಜೆಎಮ್, ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾನ್ಯರು ಪ್ರಗತಿ ಪರಿಶೀಲನೆ ನಡೆಸಿದರು.

ಸವದತ್ತಿ ಪಟ್ಟಣದಲ್ಲಿರುವ ತಾಲೂಕಾ ಮಟ್ಟದ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪ್ರಯೋಗಾಲಯವನ್ನು ಪರಿಶೀಲಿಸಿ ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಕಾಲ ಕಾಲಕ್ಕೆ ಮಾಡಿ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಸೂಚನೆ ನೀಡಿದರು.



ಬಳಿಕ ಹೂಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ದಾಖಲಾತಿಯನ್ನು ಪರಿಶೀಲಿಸಿ ನಂತರ ಹೂಲಿ‌ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಭೋಜನಾಲಯ ಹಾಗೂ ಪೇವರ್ಸ ಅಳವಡಿಕೆ ಕಾಮಗಾರಿಯನ್ನು ಪರಿಶೀಲಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಹೂಲಿ ಗ್ರಾಮದಲ್ಲಿನ ವನದನ‌ ವಿಕಾಸ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾಪಂ ಸಹಾಯಕ ನಿರ್ದೇಶಕರು (ಗ್ರಾ.ಉ,) ಆರ್ ಬಿ ರಕ್ಕಸಗಿ, ತಾಪಂ ಸಹಾಯಕ ನಿರ್ದೇಶಕರು (ಪಂ.ರಾ) ಆರ್ ಎ ಪಾಟೀಲ, ತಾಪಂ ವ್ಯವಸ್ಥಾಪಕ ಮಲ್ಲಿಕಾರ್ಜುನ ಕಂಬಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಗ್ರಾ.ಕು.ನೀ&ನೈ) ಬಸವರಾಜ ಅಯ್ಯನಗೌಡರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಪಂ ವಿಷಯ ನಿರ್ವಾಹಕರು, ತಾಪಂ ಎಂಐಎಸ್ ಸಂಯೋಜಕ ನಾಗರಾಜ ಬೆಹರೆ, ತಾಪಂ ಐಇಸಿ ಸಂಯೋಜಕ ಮಲೀಕಜಾನ ಮೋಮಿನ, ತಾಂತ್ರಿಕ ಸಂಯೋಜಕ ಮಹಾದೇವ ಕಾಮನ್ನವರ, ತಾಂತ್ರಿಕ ಸಹಾಯಕರು, ತಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ