LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ರಾಜ್ಯಾದ್ಯಂತ 800 ಬಾಲ ಕಾರ್ಮಿಕರ ರಕ್ಷಣೆ

Advertisement

ಬೆಂಗಳೂರು: ರಾಜ್ಯದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಬೇರುಸಹಿತ ಕಿತ್ತೊಗೆಯಲು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಂಟ್ರೋಲ್ ರೂಂ ನೇತೃತ್ವದಲ್ಲಿ ರಾಜ್ಯಾದ್ಯಂತ ಬೃಹತ್ ವಿಶೇಷ ಕಾರ್ಯಾಚರಣೆ (ಸ್ಪೆಷಲ್ ಡ್ರೈವ್) ನಡೆಸಲಾಗಿದೆ. 

ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಕಮಿಷನರೇಟ್‌ಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ನಡೆದ ಈ ಪರಿಶೀಲನಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ 800 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ .

ಪೊಲೀಸ್ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯದ 962 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 16,951 ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು, ಗ್ಯಾರೇಜ್‌ಗಳು ಹಾಗೂ ಕಾರ್ಖಾನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ರಾಜಧಾನಿ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದ 188 ಪೊಲೀಸ್ ಠಾಣಾ ವ್ಯಾಪ್ತಿಯ 5,897 ಸ್ಥಳಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಬರೋಬ್ಬರಿ 503 ಮಕ್ಕಳನ್ನು ರಕ್ಷಿಸಲಾಗಿದೆ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ 18 ಮಂದಿ ಆರೋಪಿಗಳ ವಿರುದ್ಧ ಇಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 9 ಹಾಗೂ ಬೆಂಗಳೂರು ದಕ್ಷಿಣದಲ್ಲಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪಿನ ವಿಶೇಷ ಅಂಚೆ ಚೀಟಿಗಳ ಬಿಡುಗಡೆ ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ರಾಜ್ಯಾದ್ಯಂತ 800 ಬಾಲ ಕಾರ್ಮಿಕರ ರಕ್ಷಣೆಗ್ರಾಮೀಣ ಭಾಗದಲ್ಲೂ ತಜ್ಞ ವೈದ್ಯರ ಸೇವೆ ಕಲ್ಪಿಸಲು ಮಹತ್ವದ ಕ್ರಮ: ಆಸ್ಪತ್ರೆಗಳ ದತ್ತು ನೀಡಲು ಸರ್ಕಾರ ನಿರ್ಧಾರ ಬಿಜೆಪಿ ಅಧಿಕಾರಕ್ಕೆ ಬರುವುದು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ. ವೈ ವಿಜಯೇಂದ್ರಗಮನ ಸೆಳೆದ ಜಗದೀಶ್ ಶೆಟ್ಟರ್-ರಮೇಶ್ ಜಾರಕಿಹೊಳಿ, ಲಖನ್ ಭೇಟಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ 8 ವಿಕೆಟ್ ಗಳ ಜಯವಂದೇ ಮಾತರಂ ಗೀತೆ ಮೊಟಕು ವಿವಾದ: ಸೆ.15ರಿಂದ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ ಇ.ಡಿಗೆ ನೇರ ಸವಾಲು ಹಾಕಿದ ಸಚಿವ ಸತೀಶ್ ಜಾರಕಿಹೊಳಿದ. ಅಪ್ರಿಕಾ-ನಮಿಬಿಯಾ 3 ನೇ ಏಕದಿನ ಪಂದ್ಯ ನಾಳೆ ರೈತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಪ್ರಕಾಶ್ ಖಂಡ್ರೆ ಆಗ್ರಹ