
ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತು ಪಡಿಸಿ,ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು 17-08-2024 ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ನೀಡಿ ಪ್ರತಿಭಟಸಿದರು.

ವೈದ್ಯಾಧಿಕಾರಿಗಳು ದಿನದ 247 ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್-19 ಅಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಭಾಧಿಸಿದ ಸಂಧರ್ಭದಲ್ಲಿ ವೈದ್ಯರು ಹಗಲು ರಾತ್ರಿ ಎನ್ನದೇ ತಮ್ಮ ಪ್ರಾಣವನ್ನೆ ಪಣಕ್ಕಿಟ್ಟು ಶ್ರಮವೈಸಿರುತ್ತಾರೆ.
ಆದರೆ ದಿ:-09.08.2024 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯವರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ವೈದ್ಯ ಸಮೂಹಕ್ಕೆ ಮಾಡಿದ ಘೋರ ಅಪರಾಧವಾಗಿದ್ದು ,ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರುಗಳ ಮನೋಸೈರ್ಯ ಕುಗ್ಗುವಂತೆ ಮಾಡಿದ್ದು. ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭಿರವಾಗಿ ಖಂಡಿಸಿದರು
ಈ ಸಂಧರ್ಭದಲ್ಲಿ ತಾಲೂಕಿನ ಮುಖ್ಯ ವೈದ್ಯಾಧಿಕಾರಿಗಳಾದ ಡಾ./ ನವೀನ್ ನಿಜಗುಲಿ, ಡಾ॥ ವರುಣ ಬೀಳಗಿ, ಡಾ, ಕಂಬಿ ಮೇಡಮ್ ಮತ್ತು ಈ ಪ್ರತಿಭಟನೆಯಲ್ಲಿ ಸರಕಾರಿ ಹಾಗೂ ಖಾಸಗಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ:- ಮಂಜುನಾಥ ಕಲಾದಗಿ

