Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

Advertisement

ಮೊಳಕಾಲ್ಮುರು: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತು ಅನೇಕ ಹಳ್ಳಿಗಳ ಜನರು ಆಶುದ್ಧ ನೀರು ಸೇವಿಸುತ್ತಾ, ನಾನಾ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹೊತ್ತಿರುವ ಗುತ್ತಿಗೆದಾರರು ನಕಲಿ ಬಿಲ್ ಸೃಷ್ಟಿಸಿ ಕೋಟ್ಯಾಂತರ ರೂಗಳನ್ನು ಅಧಿಕಾರಿಗಳೊಂದಿಗೆ ಶಾಮೀಲಾಗಿ ಗುಳುಂ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲು ನಿರ್ಮಿತಿ ಕೇಂದ್ರಕ್ಕೆ ನೀಡಿದ್ದು, ಈ ಹಿಂದೆ ತಾಲೂಕಿನ ನಾನಾ ಗ್ರಾಮಗಳಲ್ಲಿ ಹತ್ತಾರು ಘಟಕಗಳನ್ನು ನಿರ್ಮಿಸದೆ ನಕಲಿ బిలా ಸೃಷ್ಟಿಸಿ ಹಣ ಲಪಟಾಯಿಸಲಾಗಿದೆ. ಹಣ ನುಂಗಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ಧ ಕ್ರಮಿನಲ್ ಕೇಸ ಕರ್ನಾಟಕ ರಾಜ್ಯ ರೈತ ಸಂಠ ಹಾಗೂ ಹಸಿರು ಸೇವೆ ದಾಖಲಿಸಿ ಜೈಲಿಗೆ ಕಳುಹಿಸಬೇಕು. ಹಳ್ಳಿಗಳಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು, ನೈರ್ಮಲ್ಯ, ಬೀದಿ ದೀಪ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರೂ ಸೇರಿದಂತೆ ಸಿಬ್ಬಂಧಿಗಳ ಕೊರತೆ ಇದೆ. ರೋಗಿಗಳನ್ನು ವಿನಾಕಾರಣ ದೂರದ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಕಳುಹಿಸಲಾಗುತ್ತಿದೆ. ಖಾಲಿ ಹುದ್ದೆಗಳಿಗೆ ಕೂಡಲೇ ವೈದ್ಯರು ಹಾಗೂ ಸಿಬ್ಬಂಧಿಯನ್ನು ನೇಮಕ ಮಾಡಬೇಕು. ಬಿ.ಜಿ.ಕೆರೆಯಲ್ಲಿ ಕೋಟ್ಯಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ನೂತನ ಸಾರ್ವಜನಿಕ ಆಸ್ಪತ್ರೆಯನ್ನು ಉದ್ಘಾಟನೆ ಮಾಡದೆ ವ್ಯರ್ಥ ಮಾಡಲಾಗುತ್ತಿದೆ. ಶೀಘ್ರವೇ ಇದನ್ನು ಸಾರ್ವಜನಿಕರ ಸೇವೆ ನೀಡಬೇಕು ಎಂದು ಒತ್ತಾಯಿಸಿದರು.

ಸ್ಥಳದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ, ಮಲ್ಲಹಳ್ಳಿ ರವಿಕುಮಾ‌ರ್, ತಾಲೂಕು ಅಧ್ಯಕ್ಷ. ಎಸ್.ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ಮೀಸೆ ತಿಪ್ಪೇಸ್ವಾಮಿ, ಎದ್ದುಲ ತಿಪ್ಪೇಸ್ವಾಮಿ, ಭದ್ರಯ್ಯನತೋಪು ಮಲ್ಲಯ್ಯ. ಎಸ್.ಟಿ.ಚಂದ್ರಣ್ಣ, ಮೇ ಪಾಪಯ್ಯ, ನಿಂಗಣ್ಣ, ವೀರಣ್ಣ ಇದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST