LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

Advertisement
ತುಮಕೂರು: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಪಿಎಸ್ ಐ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಗ್ರಾಮಾಂತರ ಠಾಣೆ ಪಿಎಸ್ ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣೆ ವ್ಯಾಪ್ತಿಯಲ್ಲಿ ಕಾರೊಂದನ್ನು ವಶಕ್ಕೆ ಪಡೆದಿದ್ದ ಪಿಎಸ್ ಐ ಚೇತನ್ ಕುಮಾರ್, ಕಾರಿನಲ್ಲಿ ಅನುಮಾನಾಸ್ಪದ ವಸ್ತುಗಳು ಇವೆ ಎಂದು ಠಾಣೆಗೆ ತಂದಿದ್ದಾರೆ.ಬಳಿಕ ಕಾರು ಬಿಡದೇ ಪ್ರಕರಣವನ್ನೂ ದಾಅಖಲಿಸದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು ಮೂಲದ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು 40 ಸಾವಿರ ರೂಪಾಯಿ ಫೈನಲ್ ಮಾಡಿದ್ದರು. ಹಣ ಪಡೆಯುತ್ತಿದ್ದಾಗಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಟೋಲ್ ನ ಅಂಗಡಿಯೊಂದರಲ್ಲಿ ಹಣ ಕೊಡಲು ಪಿಎಸ್ ಐ ಹೇಳಿದ್ದರು. ಅಂಗಡಿಗೆ ಹಣ ಕೊಡಲು ಬರುವವನ ಫೋಟೋವನ್ನು ಅಂಗಡಿಯವನಿಗೆ ರವಾನಿಸಿದ್ದರು.

ಅಂಗಡಿಯವನ ಮೊಬೈಲ್ ಪರಿಶೀಲಿಸಿದಾಗ ಪಿಎಸ್ ಐ ಪಾತ್ರ ಬಯಲಾಗಿದೆ. ಸದ್ಯ ಪಿಎಸ್ ಐ ಚೇತನ್ ಕುಮಾರ್ ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು