Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚಕ್ಕೆ ಬೇಡಿಕೆ : ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ

Advertisement
ಬಾಗಲಕೋಟೆ : ಆರೋಪಿಯೊಬ್ಬರನ್ನು ಪ್ರಕರಣದಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಸ್ಪೀಟ್ ಜೂಜಾಟದ ಪ್ರಕರಣವೊಂದರಲ್ಲಿ ಆರೋಪಿಯನ್ನು ಕೇಸಿನಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡುಗಡೆ ಮಾಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೇದೆ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಎಸ್‌ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್ ಬಿರಾದರ್ ಅವರು ದೂರುದಾರರಿಂದ 1.70 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನೂ ರೆಡ್‌ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ.

ಕೆರೂರು ಠಾಣೆಯ ಪಿಎಸ್‌ಐ ಭೀಮಪ್ಪ ರಬಕವಿ ಮತ್ತು ಕಾನ್ಸ್ಟೇಬಲ್ ಸಂತೋಷ್ ಬಿರಾದರ್ ಹಣಕ್ಕೆ ಬೇಡಿಕೆ ಇಟ್ಟವರು.ಇಸ್ಪೀಟ್ ಆಟದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನನ್ನು ಕೇಸಿನಿಂದ ಕೈಬಿಡಲು ಮತ್ತು ಆತನ ಬೈಕ್ ಬಿಡುಗಡೆ ಮಾಡಲು ಇವರು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ದೂರುದಾರರಿಂದ 1.70 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕೆರೂರಿನಲ್ಲಿ ದಾಳಿ ಮಾಡಿ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಮಹಾಲಿಂಗ್ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಮತ್ತು ಡಿವೈಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ.

ಮುತ್ತಪ್ಪ ನಾಯ್ಕರ್ ಎಂಬುವವರು ನೀಡಿದ ದೂರು ಮತ್ತು ಫೋನ್ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ