LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಮಾಜವನ್ನು ವ್ಯಸನ ಮುಕ್ತ ಮಾಡಲು ಸಾರ್ಜಜನಿಕರ ಸಹಕಾರ ಬೇಕು: PSI ಕಿರಣ ಮೊಹಿತೆ

Advertisement
ಗೋಕಾಕ : ಮಾದಕ ವಸ್ತುಗಳ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವುದರೊಂದಿಗೆ, ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯಲು ಕಾರಣವಾಗುತ್ತಿದೆ’ ಎಂದು ಗೋಕಾಕ ಗ್ರಾಮೀಣ ಪಿಎಸ್ಐ ಕಿರಣ ಮೊಹಿತೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮೆಳವಂಕಿ ಗ್ರಾಮದ ನಮ್ಮೂರ ಸರಕಾರಿ ಪ್ರೌಡ ಶಾಲೆ ಮೆಳವಂಕಿಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿ ಮೊದಲು ಮಾದಕ ದ್ರವ್ಯವನ್ಮು ನೀವು ಸೇವಿಸುತ್ತೀರಿ.ಆಮೇಲೆ ಅದೆ ನಿಮ್ಮ ಜೀವವನ್ನು ಸೇವನೆ ಮಾಡುತ್ತದೆ.



ನಮ್ಮ ಅಮೂಲ್ಯ ಜೀವ ಉಳಿಯಬೇಕಾದರೆ ಮಾದಕ ಸಮಾಜವನ್ನು ವ್ಯಸನ ಮುಕ್ತ ಮಾಡಲು ಸಾರ್ಜಜನಿಕರ ಸಹಕಾರ ಬೇಕೆಂದರು.

ಮಾದಕ ದ್ರವ್ಯ ಸೇವನೆ ಮಾಡುವವರನ್ನು ಕುಟುಂಬದ ಅಲ್ಲದೆ ಸಮಾಜ ಕೂಡ ಆತನನ್ನು ಧಿಕ್ಕರಿಸುತ್ತದೆ. ಯುವಕರು ಮಾದಕ ದ್ರವ್ಯಗಳ ವ್ಯಸನಿಗಳಾಗದೆ ವಿದ್ಯಾರ್ಥಿಗಳು ಸಮಾಜಕ್ಕೆ ಒಳಿತನ್ನು ಬಯಸುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕೆಂದರು.

ಇವತ್ತಿನ ದಿನಾಚರಣೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವ್ಯಸನದ ಬಗ್ಗೆ ಎರ್ಪಡಿಸಿದ್ದ ಬಾಷಣ ಸ್ಪರ್ಧೆಯಲ್ಲಿ ಹಲವಾರು ವಿದ್ಯಾರ್ಥಿಗಳು ಭಾಷಣದ ಮೂಲಕ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು.



ಪಿಎಸ್ಐ ಕಿರಣ ಮೊಹಿತೆಯವರು ಬಾಷಣ ಮಾಡಿದ ವಿದ್ಯಾರ್ಥಿಗಳಿಗೆ ಶುಬ ಹಾರೈಸಿದರು.ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು,ಶಿಕ್ಷಕರು, ಸಿಬ್ಬಂದಿಯಾದ ದುಂಡೇಶ ಅಂತರಗಟ್ಟಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ:ಮನೋಹರ ಮೇಗೇರಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ