Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿ.ಪಂ. ಸಿ.ಇ.ಓ ಅವರಿಂದ ಮರೇವಾಡದಲ್ಲಿ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ.

Advertisement
ಧಾರವಾಡ: ತಾಲೂಕಿನ ಮರೇವಾಡ ಗ್ರಾಮದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸಾರ್ವಜನಿಕ ಕುಂದು ಕೊರತೆ ಸಭೆ ಜರುಗಿಸಿದರು.

ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಗ್ರಾಮ ಪಂಚಾಯತಿ ಮರೇವಾಡ ವ್ಯಾಪ್ತಿಯಲ್ಲಿ ಶಾಸನಬದ್ದ ಕಾರ್ಯಗಳಾದ ನೀರು ನಿರ್ವಹಣೆ, ಬೀದಿ ದೀಪ ನಿರ್ವಹಣೆ, ಶೌಚಾಲಯ ನಿರ್ಮಾಣ ಮತ್ತು ಅದರ ಬಳಕೆ ಹಾಗೂ ಕರ ವಸೂಲಿ ಪ್ರಗತಿಯ ಕುರಿತು ನಿರ್ದೇಶನ ನೀಡಿದರು.

ಸಭೆಯಲ್ಲಿ ಮರೇವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಸಾರ್ವಜನಿಕರು ವೈಯಕ್ತಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಕುರಿತಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸುಮಾರು 30 ಕ್ಕೂ ಹೆಚ್ಚು ಕುಂದುಕೊರತೆಗಳನ್ನು ಸಿಇಓ ಭುವನೇಶ ಪಾಟೀಲ ಅವರಿಗೆ ಸಲ್ಲಿಸಿದರು.
ಮನವಿಗಳನ್ನು ಆಲಿಸಿದ ಅವರು, ಸ್ಥಳದಲ್ಲಿದ್ದ ಇಲಾಖೆಯ ಅಧಿಕಾರಿಗಳಿಗೆ ಕಾಲಮಿತಿಯಲ್ಲಿ ಈ ಕುರಿತು ಕ್ರಮ ವಹಿಸಿ, ಪರಿಹರಿಸಲು ಮತ್ತು ವರದಿ ಸಲ್ಲಿಸಲು ಸೂಚಿಸಿದರು.



ಸಭೆಯ ನಂತರ ಅವರು ಕ್ಷೇತ್ರ ಭೇಟಿ ನೀಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯ ಶಾಲಾ ಮೈದಾನ, ಶಾಲಾ ಶೌಚಾಲಯ, ಶಾಲಾ ಭೋಜನಾಲಯ ಕಟ್ಟಡ, ಕೂಸಿನ ಮನೆ ವೀಕ್ಷಣೆ ಮಾಡಿ, ಪರಿಶೀಲಿಸಿದರು.
ಮರೇವಾಡ ಸರಕಾರಿ ಶಾಲೆಗೆ ಭೇಟಿ ನೀಡಿ, ಶಿಕ್ಷಣದ ಗುಣಮಟ್ಟ ಪರಿಶೀಲಿಸಿದರು.

ಅಂಗನವಾಡಿಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರದ ಬಗ್ಗೆ ಮತ್ತು ಶಿಕ್ಷಣದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದುಕೊಂಡರು.



ತಿಮ್ಮಾಪುರ ಮುರಾರ್ಜಿ ವಸತಿ ಶಾಲೆಗೆ ಮತ್ತು ವಸತಿ ನಿಲಯಗಳಿಗೆ ಬೇಟಿ ನೀಡಿ ಅಲ್ಲಿನ ಸ್ವಚ್ಚತೆ, ಮೂಲಭೂತ ಸೌಕರ್ಯ, ಊಟದ ವ್ಯವಸ್ಥೆ ಬಗ್ಗೆ ಸುಧೀರ್ಘವಾಗಿ ಚರ್ಚಿಸಿದರು. ಮತ್ತು ಮರೇವಾಡ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು, ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವಂತೆ ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ಬಿ.ಎಸ್ ಮೂಗನೂರಮಠ, ತಾಲೂಕ ಪಂಚಾಯತ ಇಓ ಗಂಗಾಧರ ಕಂದಕೂರ, ಮರೇವಾಡ ಗ್ರಾಮ ಪಂಚಾಯತ ಅಧ್ಯಕ್ಷ ಈರಪ್ಪ ಮ. ಪೂಜಾರ, ಉಪಾಧ್ಯಕ್ಷೆ ನೀಲವ್ವ ಮೈ. ವಗ್ಗರ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಮತ್ತು ಮರೇವಾಡ ಗ್ರಾಮ ಪಂಚಾಯತ ಸದಸ್ಯರು, ತಾಲೂಕ ಮಟ್ಟದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ ರಾಜ್ಯ ವಿಭಾಗದ ಸಹಾಯಕ ನಿರ್ದೇಶಕ ಗಿರೀಶ ಕೋರಿ ವಂದಿಸಿದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಕೋಯಪ್ಪನವರ ಸಭೆ ನಿರ್ವಹಿಸಿದರು.

ವರದಿ:ವಿನಾಯಕ ಗುಡ್ಡದಕೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ