LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಾಕಲವಾರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು, ಫಾರ್ಮ್-9 ಮತ್ತು ಫಾರ್ಮ್-11 ವಿತರಣೆಯಲ್ಲಿ ಸಾರ್ವಜನಿಕ  ಆಕ್ರೋಶ 

Advertisement

ಗುರುಮಠಕಲ್  : ತಾಲೂಕಿನ ಕಾಕಲವಾರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಫಾರ್ಮ್-9 ಹಾಗೂ ಫಾರ್ಮ್-11 (ಮನೆ ಸಂಖ್ಯೆ/ಆಸ್ತಿ ದಾಖಲಾತಿ) ನೀಡುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ವಿಳಂಬ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅನೇಕ ಫಲಾನುಭವಿಗಳಿಗೆ ಇನ್ನೂ ದಾಖಲೆಗಳು ಸಿಗದೇ ಇರುವುದರಿಂದ ಗ್ರಾಮಸ್ಥರು ಪಂಚಾಯಿತಿ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಗ್ರಾಮಸ್ಥರ ಆರೋಪದ ಪ್ರಕಾರ ಫಾರ್ಮ್-9 ಫಾರ್ಮ್-11 ಹಾಗೂ ಇ-ಸ್ವತ್ತು ಸಂಬಂಧಿಸಿದ ಅನೇಕ ಕಡತಗಳು ಎರಡು-ಮೂರು ವರ್ಷಗಳಿಂದ ಬಾಕಿ ಉಳಿದಿವೆ ಅರ್ಜಿದಾರರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ  ಹಾಗೂ ಕಂಪ್ಯೂಟರ್ ಆಪರೇಟರ್ ಅವರನ್ನು ಸಂಪರ್ಕಿಸಿದಾಗ ಒಬ್ಬರ ಮೇಲೆ ಮತ್ತೊಬ್ಬರು ಹೊಣೆ ಹಾಕಿಕೊಳ್ಳುತ್ತಿರುವುದು ಕಂಡುಬರುತ್ತಿದೆ ಸರ್ಕಾರದಿಂದ ಇನ್ನೂ ಲಾಗಿನ್  ಓಪನ್ ಆಗಿಲ್ಲ ಪೋರ್ಟಲ್ ಚಾಲನೆಯಲ್ಲಿಲ್ಲ ಎಂಬ ಉತ್ತರಗಳನ್ನು ನೀಡಲಾಗುತ್ತಿದ್ದು ಇದರಿಂದ ಸಾರ್ವಜನಿಕರು ತೀವ್ರ ಬೇಸರಗೊಂಡಿದ್ದಾರೆ

ಗ್ರಾಮಸ್ಥರ ಹೇಳಿಕೆಯಂತೆ ಈ ಸಮಸ್ಯೆಯನ್ನು ಹಲವು ಬಾರಿ ತಾಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಪರಿಹಾರ ಸಿಕ್ಕಿಲ್ಲ ಮೇಲಧಿಕಾರಿಗಳ ಸೂಚನೆಗಳಿಗೆ ಅಗತ್ಯ ಪ್ರಾಮುಖ್ಯತೆ ನೀಡಲಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ

ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಸರಾಗಬೇಕಾದ ಪಂಚಾಯಿತಿಯಲ್ಲಿ ಸಾಮಾನ್ಯ ನಾಗರಿಕರು ತಮ್ಮ ಆಸ್ತಿಯ ದಾಖಲೆಗಳಿಗಾಗಿ ವರ್ಷಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ಏಕೆ ಎಂಬ ಪ್ರಶ್ನೆಯನ್ನು ಗ್ರಾಮಸ್ಥರು ಎತ್ತಿದ್ದಾರೆ ಕೆಲವರು, ಈ ವಿಳಂಬದ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸುತ್ತಿದ್ದು ಆದರೆ ಇದಕ್ಕೆ ಯಾವುದೇ ಅಧಿಕೃತ ಸಾಕ್ಷ್ಯ ಇನ್ನೂ ಲಭ್ಯವಾಗಿಲ್ಲ ಆದ್ದರಿಂದ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ

ಗ್ರಾಮಸ್ಥರು ಕೂಡಲೇ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಿ ಅರ್ಹ ಫಲಾನುಭವಿಗಳಿಗೆ ಫಾರ್ಮ್-9, ಫಾರ್ಮ್-11 ಹಾಗೂ ಇ-ಸ್ವತ್ತು ದಾಖಲೆಗಳನ್ನು ಶೀಘ್ರದಲ್ಲಿ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.

ವರದಿ : ರವಿ ಬುರನೋಳ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ