ಕಲಾದಗಿ : ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಾಳೆ ಶನಿವಾರ ಅ 10 ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಶ್ರೀ ಗುರುಲಿಂಗೇಶ್ವರ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ
ಕರ್ನಾಟಕ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವಾಗಿದೆ ಜನರು ತಮ್ಮ ದೈನಂದಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜನರ ಮನೆ ಬಾಗಿಲಿಗೆ ಸರ್ಕಾರ ಎಂಬ ಧ್ಯೇಯದೊಂದಿಗೆ ಇದನ್ನು ಜಾರಿಗೊಳಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಉದ್ದೇಶ
ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯದೊಂದಿಗೆ ವಿವಿಧ ಇಲಾಖೆಗಳ ಸೌಲಭ್ಯಗಳು ಮತ್ತು ನಾಗರಿಕರ ಸಮಸ್ಯೆಗಳಿಗೆ ಗ್ರಾಮೀಣ ಪ್ರದೇಶದ ಮಟ್ಟದಲ್ಲೇ ಪರಿಹಾರ ಕಲ್ಪಿಸುವುದು ಇದರ ಮೂಲ ಉದ್ದೇಶವಾಗಿದೆ.
ಮನೆ ಬಾಗಿಲಿಗೆ ಸೇವೆ ನಾಗರಿಕರು ಅರ್ಜಿ ಹಿಡಿದು ಕಚೇರಿಗಳಿಗೆ ಅಲೆಯುವ ಬದಲು ಅಧಿಕಾರಿಗಳೇ ನೇರವಾಗಿ ಜನರ ಬಳಿಗೆ ಬಂದು ಅಹವಾಲುಗಳನ್ನು ಸ್ವೀಕರಿಸುತ್ತಾರೆ
ಸ್ಥಳದಲ್ಲೇ ಪರಿಹಾರ ಆಂದೋಲನದ ಅಡಿಯಲ್ಲಿ ನಡೆಯುವ ತಾಲೂಕು ಮತ್ತು ಗ್ರಾಮ ಮಟ್ಟದ ಸಭೆಗಳಲ್ಲಿ ಸಾರ್ವಜನಿಕರ ದೂರುಗಳನ್ನು ಆಲಿಸಿ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗುತ್ತದೆ.
ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರು ಮಧ್ಯವರ್ತಿಗಳಿಗೆ ಹಣ ನೀಡಿ ವಂಚನೆಗೊಳಗಾಗುವುದನ್ನು ತಪ್ಪಿಸುವುದು ಈ ಆಂದೋಲನದ ಪ್ರಮುಖ ಗುರಿಯಾಗಿದೆ.
ಸೌಲಭ್ಯಗಳ ವಿತರಣೆ
ಸಭೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿವಿಧ ಇಲಾಖೆಗಳ ಸೌಲಭ್ಯಗಳು ಯೋಜನೆಗಳ ಧನಸಹಾಯ ಮತ್ತು ಪ್ರಮಾಣಪತ್ರಗಳನ್ನು ನೇರವಾಗಿ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಶಾಸಕ ಜೆ ಟಿ ಪಾಟೀಲ್ ಜಿಲ್ಲಾ ಮತ್ತು ತಾಲೂಕು ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಮತ್ತು ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಈ ಸಭೆಗೆ ಆಗಮಿಸಿ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಾರೆ.
ವರದಿ : ಬಸವರಾಜ ಪೂಜಾರಿ


