LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭೈತರಹೊಸಹಳ್ಳಿಯಲ್ಲಿ ಪ್ರಜಾಸೇವೆ ಕಾರ್ಯಕ್ರಮ, ಶಾಸಕರಿಂದ ಅಹವಾಲು ಸ್ವೀಕಾರ

Advertisement

ತುರುವೇಕೆರೆ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ದೃಷ್ಟಿಯಿಂದ ಸರ್ಕಾರ ಪ್ರಜಾಸೇವೆ ಕಾರ್ಯಕ್ರಮ ರೂಪಿಸಿದೆ. ಆದರೆ ಪ್ರಚಾರದ ಕೊರತೆಯಿಂದ ಪ್ರಜಾಸೇವಾ ಕಾರ್ಯಕ್ರಮಕ್ಕೆ ನಿರೀಕ್ಷಿತ ಮಟ್ಟದಲ್ಲಿ ಜನರು ಬಾರದಿದ್ದರಿಂದ ತಾಲೂಕಿನ ಮಾಯಸಂದ್ರ ಹೋಬಳಿ ಭೈತರಹೊಸಹಳ್ಳಿಯ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಪ್ರಜಾಸೇವೆ ನಿರೀಕ್ಷೆಯಷ್ಟು ಪ್ರಜೆಗಳಿಲ್ಲದೆ ಬಳಲುವಂತಾಯಿತು. 

ಶಾಸಕ ಎಂ.ಟಿ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಕಾರ್ಯಕ್ರಮ ನಡೆಯಿತು. ಶಾಸಕ ಎಂ.ಟಿ.ಕೃಷ್ಣಪ್ಪನವರೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ರೈತರು, ಗ್ರಾಮಸ್ಥರಿಂದ ಖುದ್ದಾಗಿ ಅಹವಾಲುಗಳನ್ನು ಸ್ವೀಕರಿಸಿ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅರ್ಹತೆ ಮತ್ತು ನಿಯಮಾನುಸಾರ ಶೀಘ್ರ ಸಮಸ್ಯೆ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

news_1794051668_1_278.webp

 

ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳು ಅನರ್ಹರಿಗೆ ತಲುಪದಂತೆ ಕಟ್ಟೆಚ್ಚರ ವಹಿಸಿ ಅರ್ಹ ಫಲಾನುಭವಿಗೆ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಮತ್ತು ಜವಾಬ್ದಾರಿಯುತವಾಗಿ ಸ್ಪಂದಿಸಬೇಕು. ಗ್ರಾಮೀಣ ಪ್ರದೇಶದ ಜನರು, ರೈತರು ತಮ್ಮ ಕಛೇರಿಗೆ ಅಲೆಯುವಂತೆ ಮಾಡಬಾರದು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದಿ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಜನಸ್ನೇಹಿ ಆಡಳಿತ ನೀಡಲು ಪ್ರಜಾಸೇವೆ ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಕ್ಕೆ ಹೆಚ್ಚು ರೈತರು, ನಾಗರೀಕರು ಆಗಮಿಸಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಅವಕಾಶ ಕಲ್ಪಿಸಬೇಕು ಆದರೆ ಪ್ರಚಾರದ ಕೊರತೆಯಿಂದ ಹೆಚ್ಚಿನ ಜನರು ಭಾಗವಹಿಸಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚು ಪ್ರಚಾರ ನಡೆಸಿ ಗ್ರಾಮೀಣ ಜನರ ಕುಂದುಕೊರತೆ ಬಗೆಹರಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕೆಂದರು.

ವಿವಿಧ ಇಲಾಖೆಯ ಸೌಲಭ್ಯ, ಸವಲತ್ತು, ಯೋಜನೆಗಳ ಮಾಹಿತಿಯನ್ನು ಒಳಗೊಂಡ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ತಹಸೀಲ್ದಾರ್ ಜಗನ್ನಾಥ್, ಇಒ ಅನಂತರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪೂಜಾ, ಬೆಸ್ಕಾಂ ಸಹಾಯಕ ನಿರ್ದೇಶಕ ರಾಜಶೇಖರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST