Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ 

Advertisement

ನವದೆಹಲಿ: ನೀಟ್ ಯುಜಿಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ವಿಪಕ್ಷ ಕಾಂಗ್ರೆಸ್ ನಾಯಕರು ಇಂದು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಿಂದ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದವರೆಗೂ ಪಾದಯಾತ್ರೆ ಮೂಲಕವಾಗಿ ಸಾಗಿದ ಕಾಂಗ್ರೆಸ್ ನಾಯಕರು ಹಾಗೂ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಮನೆ ಮುಂದೆ ಧರಣಿ ನಡೆಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ನೀಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ನ್ಯಾಯಕೊಡಿಸುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ನ್ಯಾಯ ಸಿಗುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಪ್ರಧಾನಿ ಮನೆ ಮುಂದೆ ಧರಣಿ ಕುಳಿತಿದ್ದಾರೆ.

ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಸಂಸದರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾವಿರಾರು ವಿದ್ಯಾರ್ಥಿಗಳು, ಸಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST