Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಡೆಗೂ ಜೀವ ತೆಗೆದ ವಾಸವದತ್ತಾ ರೈಲ್ವೆ ಹಳಿ

Advertisement
ಸೇಡಂ‌ : ದಿ.೧೯/೦೨/೨೦೨೫ ರಂದು ರಾತ್ರಿ ೧೧ ಗಂಟೆಗೆ ಪಟ್ಟಣದ ನಿವಾಸಿ ಮುಕ್ತಾರ ಎಂಬಾತ ಹೃದಯಾಘಾತದಿಂದ ಸೇಡಂ ಸರಕಾರಿ ಅಸ್ಪತ್ರೆಗೆ ತೆರಳಿದ್ದಾನೆ. ಹೆಚ್ಚಿನ ಮತ್ತು ತುರ್ತು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲು ವೈದ್ಯರು ಸೂಚಿಸಿದ್ದು, ಅದರಂತೆ ಅಂಬುಲೆನ್ಸ್ ನಲ್ಲಿ ತೆರಳುವಾಗ ಮುಕ್ತಾರ ಎಂಬಾತ ಸಾವನ್ನಪ್ಪಿದ್ದಾನೆ.

ಕಲಬುರಗಿಗೆ ತೆರಳುವಾಗ ಸೇಡಂ ಪಟ್ಟಣದ ಹೃದಯಭಾಗದಲ್ಲಿರುವ ವಾಸವದತ್ತಾ ಸಿಮೆಂಟ್ ಕಾರ್ಖಾನೆಗೆ ಸಂಪರ್ಕ ಕಲ್ಪಿಸುವ ರೈಲು ಹಳಿಯಲ್ಲಿ ಗೂಡ್ಸ್ ರೈಲು ಸಂಚರಿಸಿದೆ. ಇದರಿಂದ ವಿಳಂಬವಾದ ಕಾರಣ ಮುಕ್ತಾರ ಆರೋಗ್ಯದಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಿದ್ದು, ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಿದ್ದಲ್ಲಿ ವ್ಯಕ್ತಿ ಬದುಕುತ್ತಿದ್ದ ಎನ್ನಲಾಗಿದ್ದು, ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆಯ ಎದುರು ಜನ ಜಮಾಯಿಸಿದ್ದಾರೆ. ಪ್ರಕ್ಷುಬ್ದ ವಾತಾವರಣ ನಿರ್ಮಾಣಬಮವಾಗಿದೆ.
ಕಾರ್ಖಾನೆ ಹಾಗೂ ರೈಲ್ವೆ ಇಲಾಖೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅನೇಕ ತಿಂಗಳುಗಳಿಂದ ವಾಸವದತ್ತಾ ರೈಲು ಹಳಿ ಸ್ಥಳಾಂತರಿಸಬೇಕು ಅಥವಾ ರೈಲು‌ ಸಂಚಾರ ಸಮಯ ಬದಲಾಯಿಸುವಂತೆ ಒತ್ತಾಯಿಸಿ ಸೇಡಂ ಜನಹಿತ ರಕ್ಷಣಾ ಸಮಿತಿ ಹೋರಾಟ ನಡೆಸಿತ್ತು. ಜಿಲ್ಲಾಧಿಕಾರಿ ಫೌಜಿಯ ತರನ್ನುಮ್ ಸಹ ರೈಲು ಸಂಚಾರ ಸಮಯ ಬದಲಿಸುವ ಭರವಸೆ ನೀಡಿದ್ದರು, ಆದರೆ ಇದುವರೆಗೂ ಯಾವುದೇ ಭರವಸೆ ಈಡೇರಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ಒಂದೆಡೆ ಕಾರ್ಮಿಕನ ಸಾವು, ಇನ್ನೊಂದೆಡೆ ಕಾರ್ಖಾನೆ ಸಿಬ್ಬಂದಿ ಜೊತೆ ಎಎಸ್ಪಿ ಕಾಮಿಡಿ.

ಜನರ ಜೀವನ ಎಂದರೆ ಇಲ್ಲಿನ ರಾಜಕೀಯ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಕೇವಲ ಕಾಮಿಡಿಯಾಗಿದೆ ಹೊರತು ಸಮಸ್ಯೆಗೆ ಪರಿಹಾರ ನೀಡುವ ಯೋಚನೆ ಮಾಡುತ್ತಿಲ್ಲ ಎಂದು ಶಿವುಕುಮಾರ ಅಪ್ಪಾಜಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ