ಸೂಪರ್ಸ್ಟಾರ್ ರಜನಿಕಾಂತ್ 40 ವರ್ಷಗಳ ಬಳಿಕ ಅಭಿಮಾನಿಗಳ ಜೊತೆ ಥಿಯೇಟರ್ನಲ್ಲಿ 'ಜೈಲರ್ 2' ಸಿನಿಮಾ ವೀಕ್ಷಿಸಿದ್ದಾರೆ. ಚೆನ್ನೈನ ಐಮ್ಯಾಕ್ಸ್ ಚಿತ್ರಮಂದಿರದಲ್ಲಿ ರಜನಿಕಾಂತ್ ಸಿನಿಮಾ ನೋಡಿದ ಅಪರೂಪದ ವಿಡಿಯೋ ವೈರಲ್ ಆಗಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅಪರೂಪದ ವಿದ್ಯಮಾನವೊಂದರಲ್ಲಿ 'ಜೈಲರ್ 2' ಚಿತ್ರವನ್ನು ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ಕುಳಿತು ವೀಕ್ಷಿಸಿದ್ದಾರೆ.
ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಬಳಿಕ ರಜನಿಕಾಂತ್ ಅವರು ಥಿಯೇಟರ್ನಲ್ಲಿ ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿದಂತಾಗಿದೆ.
ಈ ಕುರಿತು ಚಿತ್ರದ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ವಿಡಿಯೋ ಹಂಚಿಕೊಂಡಿದ್ದು, '40 ವರ್ಷಗಳಲ್ಲೇ ಮೊದಲ ಬಾರಿಗೆ ರಜನಿಕಾಂತ್ ಬೆಳ್ಳಿತೆರೆಯಲ್ಲಿ 'ಜೈಲರ್ 2' ಚಿತ್ರವನ್ನು ಅಭಿಮಾನಿಗಳ ಜತೆ ಕಣ್ತುಂಬಿಕೊಂಡಿದ್ದಾರೆ' ಎಂದು ತಿಳಿಸಿದೆ.


