Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ : ರಾಜನಾಥ್ ಸಿಂಗ್, ರಾಹುಲ್ ಗಾಂಧಿ ಭಾಗಿ

Advertisement
ಬೆಂಗಳೂರು : ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೂರು ದಿನಗಳ ಕಾಲ ಸಮ್ಮಿಟ್ ನಡೆಯಲಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೃಹತ್ ಕೈಗಾರಿಕಾ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ.

ಇವತ್ತು ಸಂಜೆ 4 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉಪಸ್ಥಿತಿ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ.


ಕಾರ್ಯಕ್ರಮದಲ್ಲಿ 19 ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಗುರುತಿಸಿ, ಪುರಸ್ಕರಿಸಲಾಗುತ್ತಿದೆ.


ಕರ್ನಾಟಕದಲ್ಲಿ 10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣ ಹೂಡಿಕೆಯಾಗುವ ನಿರೀಕ್ಷೆಯಿದೆ.ಮಹತ್ವಾಕಾಂಕ್ಷಿ 'ಕ್ವಿನ್ ಸಿಟಿ' ಯೋಜನೆ ಸಂಬಂಧ ದೇಶ-ವಿದೇಶದ ಕೆಲವು ವಿಶ್ವವಿದ್ಯಾಲಯಗಳ ಜತೆ ಒಡಂಬಡಿಕೆ ನಡೆಯಲಿದೆ. ಹಿಂದಿನ ಸಲದ ಸಮಾವೇಶಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು ಗೋಷ್ಠಿಗಳನ್ನು ಏರ್ಪಡಿಸಲಾಗಿದೆ.


 ಇವುಗಳಲ್ಲಿ ಗೂಗಲ್ ಎಕ್ಸ್ ಸಂಸ್ಥಾಪಕ ಸೆಬಾಸ್ಟಿಯನ್ ತ್ರನ್, ಲ್ಯಾಮ್ ರೀಸರ್ಚ್ ಮುಖ್ಯಸ್ಥ ಪ್ಯಾಟ್ರಿಕ್ ಲಾರ್ಡ್, ಜನರಲ್ ಅಟಾಮಿಕ್ಸ್ ಗ್ಲೋಬಲ್ ಕಾರ್ಪೊರೇಷನ್ ಸಿಇಒ ವಿವೇಕ್ ಲಾಲ್, ಟಿವಿಎಸ್ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು ಸೇರಿದಂತೆ ಮುಂತಾದವರು ಮಾತನಾಡಲಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ