ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಅಹಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.
ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್, ಪವನ್ ಖೇರಾ ಹಾಗೂ ಬಿಜೆಪಿಯ ಎಂ.ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೂವರು ಅಭ್ಯರ್ಥಿಗಳಿಗೆ ವಿಧಾನಸಭೆ ಕಾರ್ಯದರ್ಶಿ ಪ್ರಮಾಣಪತ್ರ ನೀಡಿದ್ದಾರೆ. ನಾಳೆ ವಿಧಾನಸೌಧಕ್ಕೆ ಮಲ್ಲಿಕಾರ್ಜುನ ಖರ್ಗೆ ಖುದ್ದು ಆಗಮಿಸಿ ನಾಮಪತ್ರ ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

