Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

" ಮಾದಾವರ ಕೆರೆ ಜಿಂದಾಲ್ ಸಂಸ್ಥೆಯಿಂದ ಒತ್ತುವರಿ : ಕೆರೆ ರಾಮಣ್ಣ ಆರೋಪ"

Advertisement
ಬೆಂಗಳೂರು : ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 'ಜಿಂದಾಲ್ ಸಂಸ್ಥೆಯವರು ಕ್ರಮೇಣವಾಗಿ ಕೆರೆಯ ಜಾಗವನ್ನು ಒತ್ತುವರಿ ಮಾಡುವ ಮೂಲಕ ಸರ್ಕಾರಿ ಜಮೀನನ್ನು ಕಬಳಿಸುವ ಹುನ್ನಾರ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಇಂದು ಕೆರೆಯಲ್ಲಿ ಜೆಸಿಬಿ ಹಾಗೂ ಹಿಟ್ಯಾಚಿಗಳಿಂದ ಕೆರೆಯಲ್ಲಿ ಕೆಲಸ ಮಾಡುತ್ತಿದ್ದು ನಾವು ಜಾಗಕ್ಕೆ ಬಂದ ತಕ್ಷಣ ಅಲ್ಲಿಂದ ಕಾಲ್ಕಿತ್ತಿದ್ದಾರೆ', ಕೆರೆ ರಾಮಣ್ಣ(ರಾಮಕೃಷ್ಣಯ್ಯ) ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು ಮುಖ್ಯರಸ್ತೆಯ ನೈಸ್ ರಸ್ತೆ ಸಮೀಪದಲ್ಲಿರುವ ಮಾದಾವರ ಕೋಡಿಪಾಳ್ಯ ಕೆರೆಯನ್ನು ಜಿಂದಾಲ್ ಸಂಸ್ಥೆಯವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೆರೆಯನ್ನು ಕಣ್ಣ ಮುಂದೆಯೇ ಕಬಳಿಸುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಸರ್ಕಾರದ ಜಾಗವನ್ನು ಉಳಿಸಬೇಕಾದವರೇ ಅವರ ಜೊತೆ ಶಾಮೀಲಾಗಿ ಏನೂ ಕಾಣದವರಂತೆ ಸುಮ್ಮನಿದ್ದಾರೆ.



ಶಾಸಕರ ಗಮನಕ್ಕೆ ತಂದರೂ ಏನೂ ಪ್ರಯೋಜನವಿಲ್ಲ. ಅದೇ ಜಾಗದಲ್ಲಿ ಬಡವರ ಮನೆ ಇದ್ದರೆ ಅಧಿಕಾರಿಗಳ ಸಮೇತ ಬಂದು ಬಡವರ ಮುಂದೆ ತಮ್ಮ ಅಧಿಕಾರ ದರ್ಪ ಚಲಾಯಿಸುತ್ತಿದ್ದರು. ಆದರೆ ಪ್ರಭಾವಿಗಳಿಗೊಂದು ನ್ಯಾಯ ಬಡವರಿಗೊಂದು ನ್ಯಾಯ ಎಂಬಂತಾಗಿದೆ ನಮ್ಮ ಸರ್ಕಾರದ ವ್ಯವಸ್ಥೆ', ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಲೋಕಾಯುಕ್ತ ಸೇರಿದಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ರಾಜ್ಯಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಯಾವ ಉದ್ದೇಶಕ್ಕೆ ಎಂಬುದು ತಿಳಿಯುತ್ತಿಲ್ಲ. ಪೊಲೀಸರು ಕೂಡಾ ಅವರ ಕೈಗೊಂಬೆಯಾಗಿ ಅವರಿಗೆ ಸಪೋರ್ಟ್ ಮಾಡುತ್ತಿದ್ದಾರೆ.

ಸತತವಾಗಿ 14 ವರ್ಷಗಳಿಂದ ಕೆರೆ ಉಳಿಸಲು ಹೋರಾಡುತ್ತಿದ್ದರೂ ಪದೇ ಪದೇ ಒತ್ತುವರಿ ಮಾಡುತ್ತಾ ಬಂದಿದ್ದಾರೆ. ನ್ಯಾಯ ಕೊಡಿಸಬೇಕಾದ ಮಾದನಾಯಕನಹಳ್ಳಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಮುರಳಿ ನನ್ನನ್ನು ಬೆದರಿಸಿ ನನ್ನನ್ನು ಜೈಲಿಗೆ ಹಾಕ್ತೀನಿ ಅಂತಾ ಅವಾಜ್ ಹಾಕ್ತಾರೆ. ನನ್ನ ಪ್ರಾಣ ಹೋದರೂ ಸರಿ ಕೆರೆಯ ಜಾಗವನ್ನು ಮರಳಿ ಪಡೆಯುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ದೂರು ನೀಡುತ್ತೇನೆ', ಎಂದು ತಿಳಿಸಿದರು.
ಜಿಂದಾಲ್ ಸಂಸ್ಥೆಯವರು ಸಮಾಜ ಸೇವೆ ಮಾಡುತ್ತಿದ್ದೇನೆ ಅಂತಾ ಹೇಳಿಕೊಂಡು ಸಾರ್ವಜನಿಕರ ಸ್ವತ್ತಾದ ಕೆರೆಯ ಜಾಗವನ್ನು ಹೊಡೆಯುವ ಉದ್ದೇಶವೇನು. ಸರ್ಕಾರ ಈ ಕೂಡಲೇ ಕೆರೆ ಒತ್ತುವರಿಯನ್ನು ನಿಲ್ಲಿಸುವುದರ ಜೊತೆಗೆ ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಮರಳಿ ನೀಡಬೇಕು', ಎಂದು ಒತ್ತಾಯಿಸಿದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ