LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ದಾಖಲೆಯ 450 ಕೋಟಿ ರೂ.ಗೆ ರಾಮಾಯಣ ಓಟಿಟಿ ರೈಟ್ಸ್ ಸೇಲ್ 

Advertisement

ಮುಂಬೈ : ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ-1 ನವೆಂಬರ್ 5 ರಂದು ಬಿಡುಗಡೆಯಾಗುತ್ತಿದೆ. ಈಗ ಚಿತ್ರದ ಓಟಿಟಿ ರೈಟ್ಸ್ ಮಾರಾಟದ ಮೂಲಕ ಚಿತ್ರ ಸುದ್ದಿಯಲ್ಲಿದೆ. 

ಈ ಚಿತ್ರದ ಓಟಿಟಿ ರೈಟ್ಸ್ ಬರೋಬ್ಬರಿ 450 ಕೋಟಿ ರೂಪಾಯಿಗೆ ಮಾರಾಟವಾಗಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಸಿನಿಮಾ ಎಂಬ ದಾಖಲೆ ಬರೆದಿದೆ.

ಸ್ಟಾರ್ ಗ್ರೂಪ್ ರಾಮಾಯಣ ಚಿತ್ರದ ಓಟಿಟಿ ರೈಟ್ಸ್ ಅನ್ನು ಪಡೆದಿದೆ ಎನ್ನಲಾಗಿದೆ. ಈ ಹಿಂದೆ ಪ್ರಭಾಸ್ ನಟನೆಯ ಕಲ್ಕಿ ಸಿನಿಮಾದ ಓಟಿಟಿ ರೈಟ್ಸ್ 375 ಕೋಟಿ ರೂಪಾಯಿಗೆ ಮಾರಾಟವಾಗಿ ದಾಖಲೆ ಬರೆದಿತ್ತು. 

ಈಗ ಆ ದಾಖಲೆಯನ್ನು ರಾಮಾಯಣ ಮುರಿದಿದೆ. ಇನ್ನು, ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಯಶ್ ರಾವಣನಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ಹಾಗೂ ರವಿ ದುಬೆ ಲಕ್ಷ್ಮಣನಾಗಿ ನಟಿಸುತ್ತಿದ್ದಾರೆ. 

ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರವನ್ನು ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಪಾಲುದಾರಿಕೆಯಲ್ಲಿ ನಿರ್ಮಿಸುತ್ತಿದೆ. 

ಎರಡು ಭಾಗಗಳಲ್ಲಿ ಮೂಡಿಬರಲಿರುವ ಈ ಸಿನಿಮಾದ ಮೊದಲ ಭಾಗ ನವೆಂಬರ್ 5, 2026ರಂದು ಬಿಡುಗಡೆಯಾಗಲಿದ್ದು, ಎರಡನೇ ಭಾಗವು ದೀಪಾವಳಿ 2027ರ ಸಂದರ್ಭದಲ್ಲಿ ತೆರೆಗೆ ಬರಲಿದೆ.

ಹಿಂದಿ, ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಐಮ್ಯಾಕ್ಸ್ ಸೇರಿದಂತೆ ವಿವಿಧ ಪ್ರೀಮಿಯಂ ಚಿತ್ರ ಪ್ರದರ್ಶನ ಸ್ವರೂಪಗಳಲ್ಲಿ ಚಿತ್ರವನ್ನು ವೀಕ್ಷಿಸಬಹುದಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST