Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡಿಸಿಸಿ ಬ್ಯಾಂಕ್ ಚುನಾವಣೆ ಗೆಲುವಿಗೆ ರಮೇಶ ಜಾರಕಿಹೊಳಿ ಕಾರ್ಯತಂತ್ರ

Advertisement


ಯರಗಟ್ಟಿ: ಅಕ್ಟೋಬರ್ 19 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಯರಗಟ್ಟಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸೌಹಾರ್ದ ಸಭೆ ಗುರುವಾರ ಪಟ್ಟಣದಲ್ಲಿ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯಿತು.

‘ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದರೂ, ಮೊದಲ ಹಂತದ ಪ್ರಚಾರ ಈಗಾಗಲೇ ಆರಂಭವಾಗಿದೆ. ಬಿಡಿಸಿಸಿ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಯರಗಟ್ಟಿ ಅಭ್ಯರ್ಥಿ ಅಜೀತಕುಮಾರ ದೇಸಾಯಿ, ಸವದತ್ತಿ ಅಭ್ಯರ್ಥಿ ವೀರೂಪಾಕ್ಷ ಮಾಮನಿ ಹಾಗೂ ನಮ್ಮ ಎಲ್ಲಾ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಈಗಾಗಲೇ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ನಮ್ಮ ಗುಂಪು ಮತ್ತೊಂದು ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂಬ ವಿಶ್ವಾಸ ನಮಗಿದೆ’ ಎಂದು ರಮೇಶ ಜಾರಕಿಹೊಳಿ ಸಭೆಯಲ್ಲಿ ಹೇಳಿದರು.

ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ನ್ನು ಬಲಿಷ್ಠವಾಗಿ ಕಟ್ಟಲು ಸಮಿತಿಯ ಎಲ್ಲ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆಮಾಡಬೇಕು. ಎಂಬ ಮಾತು ಕಥೆಗಳು ಆಗಿದ್ದವು ಆದರೆ ಹೊಸಬರ ಪಟ್ಟಿ ಹೆಚ್ಚುತ್ತಿರುವ ಕಾರಣ ಚುಣಾವಣೆ ಮಾಡಬೇಕಾಗಿದೆ.

ಈ ವೇಳೆ ಮಾಜಿ ಯಲ್ಲಮ್ಮನ ದೇವಸ್ಥಾನ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜಗದೀಶ ಕೌಜಗೇರಿ, ವೆಂಕಟೇಶ ದೇವರಡ್ಡಿ, ರಾಜೇಂದ್ರಗೌಡ ಪಾಟೀಲ, ಮೋಹನ ಹಾದಿಮನಿ, ಗೌಡಪ್ಪ ಸವದತ್ತಿ, ಮಹಾದೇವ ಯಂಡ್ರಾವಿ, ಪಿಕೆಪಿಎಸ್ ಅಧ್ಯಕ್ಷರಾದ ಮಹಾಂತೇಶ ಗೋಡಿ, ವಿಠ್ಠಲ ಬಂಟನೂರ, ಬಿ. ಕೆ. ಪಾಟೀಲ, ಮಾಜಿ ತಾ. ಪಂ. ಅಧ್ಯಕ್ಷರಾದ ವಿನಕುಮಾರ ದೇಸಾಯಿ, ಪರ್ವತಗೌಡ ಪಾಟೀಲ, ಮಾಜಿ ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣಾ ಚಂದರಗಿ, ಮಾಜಿ ಎಪಿಎಂಸಿ ಅಧ್ಯಕ್ಷ ಪ್ರಕಾಶ ನರಿ, ಪುಂಡಲಿಕ ಮೇಟಿ, ಬೀರಪ್ಪ ಕುರಿ, ಕೃಷ್ಣಮೂರ್ತಿ ತೊರಗಲ್, ಆನಂದ ಬಾಗೋಡಿ, ಸದಾನಂದ ಪಾಟೀಲ, ಕುಮಾರ ಜಕಾತಿ ಮಹಾದೇವ ಮುರಗೋಡ, ಕಾಡಪ್ಪ ವೀರಶೆಟ್ಟಿ ಸೇರಿದಂತೆ 23 ಪಿಕೆಪಿಎಸ್ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಇದ್ದರು.

ಹೇಳಿಕೆ: ಯರಗಟ್ಟಿ ತಾಲೂಕಾ ಅಭ್ಯರ್ಥಿಯಾಗಿ ಅಜೀತಕುಮಾರ ದೇಸಾಯಿ, ಸವದತ್ತಿ ತಾಲೂಕಾ ಅಭ್ಯರ್ಥಿಯಾಗಿ ವಿರೂಪಾಕ್ಷ ಮಾಮನಿ ಇವರನ್ನು ಆಯ್ಕೆ ಮಾಡಲಾಗಿದೆ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹಾಗೂ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಮ್ಮ ಪೆನಲ್ ಗೆಲುವು ನಿಶ್ಚಿತ ಬಿಡಿಸಿಸಿ ಬ್ಯಾಂಕ್ ಬಾಲಚಂದ್ರ ಜಾರಕಿಹೊಳಿ ಅವರು ತೆಕ್ಕೆಗೆ.
ರಮೇಶ ಜಾರಕಿಹೊಳಿ, ಮಾಜಿ ಸಚಿವರು.

ವರದಿ: ಈರಣ್ಣಾ ಹೂಲ್ಲೂರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ