Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ: 65 ವರ್ಷದ ಆರೋಪಿಗೆ ಗಲ್ಲು ಶಿಕ್ಷೆ

Advertisement

ಪುಣೆ : ಜಿಲ್ಲೆಯ ನಾಸರಾಪುರ ಗ್ರಾಮದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ 65 ವರ್ಷದ ಆರೋಪಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಅಪರಾಧ ನಡೆದ ಕೇವಲ 60 ದಿನಗಳಲ್ಲೇ ಪ್ರಕರಣದ ವಿಚಾರಣೆ ಪೂರ್ಣಗೊಂಡು ತೀರ್ಪು ಪ್ರಕಟವಾಗಿದೆ.

ಈ ದುರ್ಘಟನೆ 2026ರ ಮೇ 1ರಂದು ನಡೆದಿತ್ತು. ತನ್ನ ತಾಯಿಯ ಮನೆಗೆ ಬಂದಿದ್ದ 3 ವರ್ಷದ ಬಾಲಕಿಯನ್ನು ಆರೋಪಿ ಸಮೀಪದ ಜಾನುವಾರು ಕೊಟ್ಟಿಗೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ಕಾಣೆಯಾಗುತ್ತಿದ್ದಂತೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಬಳಿಕ ಆಕೆಯ ಮೃತದೇಹ ಕೊಟ್ಟಿಗೆಯಲ್ಲಿ ಪತ್ತೆಯಾಗಿತ್ತು.

ಘಟನೆ ಬಳಿಕ ನಾಸರಾಪುರ ಸೇರಿದಂತೆ ಪುಣೆಯ ವಿವಿಧ ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸ್ಥಳೀಯರು ರಸ್ತೆ ತಡೆ ನಡೆಸಿ, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದ ಪೊಲೀಸರು ಘಟನೆ ನಡೆದ ದಿನವೇ ಆರೋಪಿಯನ್ನು ಬಂಧಿಸಿದ್ದರು. 16 ದಿನಗಳಲ್ಲೇ 1,200 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಮೇ 28ರಂದು ಆರೋಪ ಚಾರ್ಜ್‌ ಫ್ರೇಮ್ ಮಾಡಲಾಗಿದ್ದು, ಜೂನ್ 20ರಂದು ಅಂತಿಮ ವಾದಗಳು ಪೂರ್ಣಗೊಂಡಿದ್ದವು. ಬಳಿಕ ಜೂನ್ 25ರಂದು ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ಪ್ರಕಟಿಸಿತು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST