ಐಪಿಎಲ್ ಆಟಗಾರ ಅಭಿಷೇಕ ಪೂರೆಲ್ ಅವರನ್ನು ಯುವತಿ ಮೇಲಿನ ಅತ್ಯಾಚಾರ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಪಶ್ವಿಮ ಬಂಗಾಳ ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ಅಭಿಷೇಕ ಪೂರೆಲ್ ಯುವತಿ ಮೇಲಿನ ಅತ್ಯಾಚಾರ ನಡೆಸಿದ್ದಾರೆಂಬ ಆರೋಪ ಎದುರಿಸುತ್ತಿದ್ದರು.
ವೈದ್ಯಕೀಯ ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಬೆಂಗಾಲ ಪೊಲೀಸರು ಅಭಿಷೇಕ್ ಪೂರೆಲ್ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಕರಣಕ್ಕೆ ಸಂಬAಧಿಸಿದAತೆ ಕೋಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದನ್ವಯ ಕೋಲ್ಕತ್ತಾ ಪೊಲೀಸರು ಈ ಕ್ರಮ ವಹಿಸಿದ್ದಾರೆ.


