ಧಾರವಾಡ: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ, ಖಾಸಗಿ ಫೋಟೋಗಳನ್ನು ಸೆರೆ ಹಿಡಿದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
9ನೇ ತರಗತಿಯ 14 ವರ್ಷದ ಬಾಲಕಿಯನ್ನು ಪುಸಲಾಯಿಸಿ, ತಾನು ನಿನ್ನನ್ನು ಪ್ರೀತಿಸುವುದಾಗಿ ಹೇಳಿ ಆರೋಪಿ ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ.
ನಿರ್ಜನ ಪ್ರದೇಶದಲ್ಲಿದ್ದ ಆರೋಪಿಯನ್ನು ಕಂಡು ಸ್ಥಳೀಯರು ವಿಚಾರಿಸಿದ್ದಾರೆ. ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಖಾಸಗಿ ಫೋಟೋಗಳು ಪತ್ತೆಯಾಗಿವೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿದ್ಯಾಗಿರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಖಾಜಾಸಾಬ್ ಪಠಾಣ್ ಎಂದು ಗುರುತಿಸಲಾಗಿದೆ.

