Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ದರ್ಶನಕ್ಕೆಂದು ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ : ಮಹಿಳೆ ಸೇರಿ ಮೂವರು ಅರೆಸ್ಟ್ 

Advertisement

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದ್ಯಪಾನ ಮಾಡಿಸಿ, ರಾತ್ರಿಯಿಡೀ ಆಕೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೇವರ ದರ್ಶನಕ್ಕೆಂದು ಕರೆದುಕೊಂಡು ಹೋಗಿ ಈ ಭೀಕರ ಕೃತ್ಯ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಇಬ್ಬರು ಪುರುಷರು ಹಾಗೂ ಇದಕ್ಕೆ ಸಹಕರಿಸಿದ ಒಬ್ಬ ಮಹಿಳೆ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 17ರ ರಾತ್ರಿ ಮಹಿಳೆಯೊಬ್ಬಳು ದೇವಸ್ಥಾನಕ್ಕೆ ಹೋಗೋಣ ಎಂದು ಬಾಲಕಿಯನ್ನು ನಂಬಿಸಿ ಕರೆದುಕೊಂಡು ಬಂದಿದ್ದಳು. ಆ ಬಳಿಕ ಆಟೋದಲ್ಲಿ ಬಂದ ಇಬ್ಬರು ಆರೋಪಿಗಳು ಅಪ್ರಾಪ್ತೆಯನ್ನು ಬೇರೆಡೆಗೆ ಕರೆದೊಯ್ದಿದ್ದಾರೆ. 

ಅಲ್ಲಿ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ, ತೀವ್ರವಾಗಿ ಹಲ್ಲೆ ನಡೆಸಿದ ಆರೋಪಿಗಳು, ಬಳಿಕ ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ಆಕೆಯನ್ನು ಕರೆದೊಯ್ದು ರಾತ್ರಿ ಪೂರ್ತಿ ಅತ್ಯಾಚಾರ ಎಸಗಿದ್ದಾರೆ. ಬೆಳಗಾಗುತ್ತಿದ್ದಂತೆ ಬಾಲಕಿಯನ್ನು ಮನೆ ಬಳಿ ಬಿಟ್ಟು, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST