Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ

Advertisement
ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪ ಜಂಗ್ಲಿಗೆ ತೆರಳುವ ರಸ್ತೆಯಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡ ದಂಡೆ ಕಾಲುವೆ ಬಳಿ ಕುಳಿತಿದ್ದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಸ್ರೇಲ್ ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಂ ಸ್ಟೇ ಒಡತಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರು ನೀಡಲಾಗಿದೆ.

ಅಮೆರಿಕ, ಇಸ್ರೇಲ್, ಮಹಾರಾಷ್ಟ್ರ ಮತ್ತು ಒಡಿಶಾದಿಂದ ಬಂದಿದ್ದ ನಾಲ್ವರು ಪ್ರವಾಸಿಗರು ಹಾಗೂ ಸ್ಥಳೀಯ ಹೋಸ್ಟೇ ಒಡತಿ ರಾತ್ರಿ ಸಂಗೀತ, ಕೆರೆಯ ಸೌಂದರ್ಯ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಹಣ ಕೊಡದೇ ಇದ್ದಾಗ ಹಲ್ಲೆ ನಡೆಸಿದ್ದಾರೆ. ಇಬ್ಬರ ಮೇಲೆ ಅತ್ಯಾಚಾರ ಎಸಗಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ದುಷ್ಕರ್ಮಿಗಳ ವಿರುದ್ಧ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಕೊಲೆ ಯತ್ನ ಕಾಯ್ದೆಗಳ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ