Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರದಲ್ಲಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ : ಆರ್ ಬಿ ತಿಮ್ಮಾಪುರ

Advertisement

ಬೆಂಗಳೂರು : ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚು ಗಳಿಕೆಯಾಗಿದೆ. ಹೀಗಾಗಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದ್ದು, ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ.


ವಿಧಾನಸೌಧದಲ್ಲಿ ಮಂಗಳವಾರ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಪ್ರಸಕ್ತ ಆರ್ಥಿಕ ವರ್ಷದ ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಗಳಿಕೆಯಾಗಿದೆ.

ಈ ಅವಧಿಯಲ್ಲಿ 16,290 ಕೋಟಿ ರು. ಆದಾಯದ ನಿರೀಕ್ಷೆಯಿತ್ತು. ಆದರೆ, 16,358 ಕೋಟಿ ರು. ಆದಾಯ ಬಂದಿದ್ದು, 68.78 ಕೋಟಿ ರು. ಹೆಚ್ಚಿನ ಆದಾಯ ಬಂದಿದೆ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡ ಲಾಗುತ್ತಿದೆ.

5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ 7 ಕಲಿಸಲಾಗಿದೆ. ಸಿಎಲ್ له ಪರವಾನಗಿ ಹಂತಗಳನ್ನು ಕಡಿತಗೊಳಿಸಲಾಗಿದೆ. ಇದೀಗ ಪ್ರೀಮಿಯಂ ಬ್ರಾಂಡ್‌ನ ಮದ್ಯಗಳ ಬೆಲೆ ಇಳಿಕೆಗೂ ಚಿಂತನೆ ನಡೆಸಲಾಗಿದೆ ಎಂದರು.

ಅಬಕಾರಿ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡದ, ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಎ ವೃಂದದ 31, ಬಿ ವೃಂದದ 20 ಹಾಗೂ 43 ಅಬಕಾರಿ ಸಬ್ ಇನ್ಸ್‌ಪೆಕ್ಟರ್‌ಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಉಳಿಕೆ ಪರವಾನಗಿ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್.ಬಿ. ತಿಮ್ಮಾಪೂರ್, ಕೆಲ ಉಳಿಕೆ ಪರವಾನಗಿಗಳಿವೆ. ಅವುಗಳನ್ನು ಹರಾಜು ಮಾಡುವ ಚಿಂತನೆ ಮಾಡಿದ್ದೇವೆ ಎಂದರು. ಅಬಕಾರಿ ಆಯುಕ್ತ ವೆಂಕಟೇಶ್‌, ಹೆಚ್ಚುವರಿ ಆಯುಕ್ತರಾದ ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ