LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ, ಐಪಿಎಲ್ ಎಲ್ಲಾ ಬ್ಯಾನ್ ಮಾಡಿ : ವಾಟಾಳ್ ನಾಗರಾಜ್

Advertisement
ಮೈಸೂರು : ಆರ್.ಸಿ.ಬಿ ಸಂಭ್ರಮಾಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ವಹಣೆಯ ವೈಫಲ್ಯ ಖಂಡಿಸಿ ಇಂದು ನಗರದ ಹಾರ್ಡಿಂಜ್ ವೃತ್ತದ ಬಳಿ ಕನ್ನಡಪರ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು, ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮಾಚರಣೆಯಲ್ಲಿ ಹನ್ನೊಂದು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಸರ್ಕಾರದ ನಿರ್ವಹಣೆ ವೈಫಲ್ಯವೇ ಇದಕ್ಕೆ ಕಾರಣವಾಗಿದೆ.
ಐಪಿಎಲ್ ಪಂದ್ಯಾವಳಿಯನ್ನು ನಿಷೇಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ಐಪಿಎಲ್ ರದ್ದುಗೊಳಿಸಿ ಹಾಗೂ ಆರ್‌ಸಿಬಿ ತಂಡವನ್ನು ಬ್ಯಾನ್ ಮಾಡಬೇಕು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕ್ರಿಕೆಟ್ ಮಂಡಳಿಯಿಂದ 5 ಕೋಟಿ ಪರಿಹಾರ ನೀಡಬೇಕು. ಸರ್ಕಾರದಿಂದ 1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡೋದು ಬಿಡೋದು ಅವರಿಗೆ ಬಿಟ್ಟಿದ್ದು ಎಂದು ವಾಟಾಳ್ ನಾಗರಾಜ್‌ ಅಸಮಾಧಾನ ಹೊರಹಾಕಿದರು. ಪ್ರತಿಭಟನೆಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿದವು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ