ಬೆಂಗಳೂರು : ವಿಶ್ವವಿದ್ಯಾಲಯಗಳಲ್ಲಿ 1,000 ಹುದ್ದೆಗಳನ್ನು ತುಂಬಲು ಈಗಾಗಲೇ ಸರಕಾರದಿಂದ ಅನುಮತಿ ಪಡೆದಿದ್ದು, ಶೀಘ್ರದಲ್ಲೇ ನೇಮಕಾತಿ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಪರಿಷತ್ತಿನ 25ನೇ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.ವಿವಿಗಳ ಜಮೀನು ಒತ್ತುವರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಐತ್ತುವರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ.ರಾಜ್ಯದ ಎಲ್ಲ ವಿವಿಗಳಿಗೆ ಖುದ್ದಾಗಿ ಭೇಟಿ ನೀಡಿ ಕುಲಪತಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲು ಈಗಾಗಲೇ ಸಮಯ ನಿಗದಿಪಡಿಸಿದ್ದೇನೆ ಎಂದರು.


