LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ 

Advertisement
ಬೆಂಗಳೂರು : ರಾಜ್ಯದಲ್ಲಿ ಮೇ ಅಂತ್ಯದವರೆಗೆ ಒಟ್ಟು 3.37 ಕೋಟಿ ವಾಹನಗಳ ನೋಂದಣಿಯಾಗಿವೆ. ಅದರಲ್ಲಿ 1.24 ಕೋಟೆ ಬೆಂಗಳೂರು ನಗರದಲ್ಲಿಯೇ ಇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸಾರಿಗೆ ಇಲಾಖೆಗೆ ವಾಹನ ತಪಾಸಣೆಗಾಗಿ 40 ಮಹಿಂದ್ರಾ ಬೊಲೆರೊ ವಾಹನಗಳನ್ನು ಬುಧವಾರ ಹಸ್ತಾಂತರ ಮಾಡಿ ಅವರು ಮಾತನಾಡಿದರು. 'ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮೋಟಾರು ವಾಹನ ನಿರೀಕ್ಷಕರ ಸಂಖ್ಯೆಯೂ ಹೆಚ್ಚಳವಾಗಬೇಕು. ತಪಾಸಣೆಗಳೂ ಹೆಚ್ಚಾಗಬೇಕು. ಅದಕ್ಕಾಗಿ ಈಗಾಗಲೇ 129 ನಿರೀಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ' ಎಂದು ವಿವರಿಸಿದರು.

ಸಾರಿಗೆ ಇಲಾಖೆಯಿಂದ ರಸ್ತೆ ಸುರಕ್ಷತೆ ಮತ್ತು ಪ್ರವರ್ತನ ಚಟುವಟಿಕೆಯನ್ನು ಚುರುಕುಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆಗಳನ್ನು ನೀಡಿವೆ. ಜನಸ್ನೇಹಿ ಕಾರ್ಯಕ್ರಮಗಳನ್ನುಜಾರಿಗೊಳಿಸಬೇಕು ಎಂದು ತಿಳಿಸಿವೆ. ಅದಕ್ಕೆ ಅನುಗುಣವಾಗಿ ಕೆಲಸ ಮಾಡಲು ವಾಹನ ಖರೀದಿಸಲಾಗಿದೆ ಎಂದರು.

ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾಗಿರುವ ರಸ್ತೆ ಸುರಕ್ಷತಾ ಸಮಿತಿಯು ನೀಡಿರುವ ಸೂಚನೆಯಂತೆ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳದ ವಾಹನಗಳಿಗೆ ದಂಡ ಹಾಕಬೇಕು. ಚಾಲಕರು,ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾತ್ರಿ ಸಂಚಾರದ ವೇಳೆ ಟೈಲ್ ಲ್ಯಾಂಪ್, ಇಂಡಿಕೇಟರ್ಗಳು ಸುಸ್ಥಿತಿಯಲ್ಲಿ ಇವೆಯೇ ಎಂದು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ