Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 17 ರಿಂದ ಐಪಿಎಲ್ ಪುನರಾರಂಭ

Advertisement
ಆರ್ ಸಿಬಿ ತಂಡಕ್ಕೆ ಮತ್ತಿಬ್ಬರು ಬಿರುಸಿನ ಬ್ಯಾಟ್ಸಮನ್ ಗಳ ಬೆಂಬಲ

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ಮುಂದೂಡಲ್ಪಟ್ಟಿದ್ದ ಇಂಡಿಯನ್​ ಪ್ರೀಮಿಯರ್​ ಲೀಗ್​ (IPL) ಶನಿವಾರದಿಂದ ಪುನರಾರಂಭಗೊಳ್ಳಲ್ಲಿದೆ. ಮೊದಲ ಪಂದ್ಯದಲ್ಲಿ ರಾಯಲ್​ ಚಾಲೆಂಜಸರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಮುಖಾಮುಖಿ ಆಗುತ್ತಿವೆ. ಆರ್​ಸಿಬಿ ಸದ್ಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದರೇ ಪ್ಲೇಆಫ್​ಗೆ ತಲುಪಲಿದೆ.



ಏತನ್ಮಧ್ಯೆ, ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯಿಂದಾಗಿ ತವರಿಗೆ ಮರಳಿದ್ದ ವಿದೇಶಿ ಆಟಗಾರರು ವಾಪಸ್​ ಕರೆತರುವುದರ ಬಗ್ಗೆ ಎಲ್ಲಾ ಫ್ರಾಂಚೈಸಿಗಳಿಗೆ ಐಪಿಎಲ್​ ಮಂಡಳಿ ತಿಳಿಸಿದೆ. ಇದರ ಬೆನ್ನಲ್ಲೇ ವಿದೇಶಿ ಆಟಗಾರರನ್ನು ಕರೆ ತರಲು ಆಯಾ ದೇಶದ ಕ್ರಿಕೆಟ್​ ಮಂಡಳಿ ಜೊತೆ ಫ್ರಾಂಚೈಸಿಗಳು ಮಾತುಕತೆ ನಡೆಸಿವೆ. ಸದ್ಯ ಪರಿಸ್ಥಿತಿ ಸುಧಾರಿಸಿದ್ದರಿಂದ ಕೆಲ ಆಟಗಾರರು ಮತ್ತೆ ಭಾರತಕ್ಕೆ ಮರಳುತ್ತಿದ್ದಾರೆ.

ಆರ್‌ಸಿಬಿ ತಂಡವನ್ನು ಪ್ರತಿನಿಧಿಸುವ ವೆಸ್ಟ್ ಇಂಡೀಸ್ ಸ್ಫೋಟಕ ಹಿಟ್ಟರ್ ರೊಮಾರಿಯೊ ಶೆಫರ್ಡ್ ಕೂಡ ಮುಂದಿನ ಪಂದ್ಯಗಳಿಗಾಗಿ ಆರ್​ಸಿಬಿ ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಈ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಶೆಫರ್ಡ್​ ಎಲ್ಲರ ಗಮನ ಸೆಳೆದಿದ್ದರು. ಇದೀಗ ಅವರು ವಾಪಸ್ಸಾಗಿದ್ದು ತಂಡಕ್ಕೆ ಆನೆಬಲ ಬಂದಂತಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೆಸ್ಟ್ ಇಂಡೀಸ್ ಆಟಗಾರ ಆಂಡ್ರೆ ರಸೆಲ್ ಮತ್ತು ಸುನಿಲ್ ನರೈನ್ ಕೂಡ ಭಾರತಕ್ಕೆ ಆಗಮಿಸಲಿದ್ದಾರೆ. ರಸೆಲ್ ಭಾರತಕ್ಕೆ ವಾಪಾಸ್ಸಾಗುವ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೊದಲ್ಲಿ ರಸೆಲ್ ಜೊತೆಗೆ ರೊಮಾರಿಯೊ ಶೆಫರ್ಡ್, ನರೈನ್ ಮತ್ತು ಕೆಕೆಆರ್ ಮಾರ್ಗದರ್ಶಕ ಡ್ವೇನ್ ಬ್ರಾವೋ ಇದ್ದಾರೆ.

ಮತ್ತೊಂದೆಡೆ ಇಂಗ್ಲೆಂಡ್​ನ ಸಿಡಿಲಬ್ಬರದ ಬ್ಯಾಟರ್​ ​ಮತ್ತು ಓಪನರ್​ ಫಿಲ್​ ಸಾಲ್ಟ್​ ಕೂಡ ಮರಳುವುದು ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಇವರು ಕ್ವಾಲಿಫೈ ಪಂದ್ಯಗಳ ವರೆಗೆ ತಂಡದ ಜೊತೆ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರಣ ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ನಡುವೆ ಜೂನ್​ 6 ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಈ ಸರಣಿಗಾಗಿ ಪ್ರಕಟಗೊಂಡ ಇಂಗ್ಲೆಂಡ್ ತಂಡದಲ್ಲಿ ಸಾಲ್ಟ್​ ಸ್ಥಾನ ಪಡೆದಿದ್ದಾರೆ. ಈ ಹಿನ್ನೆಲೆ ಐಪಿಎಲ್​ ಫೈನಲ್​ ಪಂದ್ಯದವರೆಗೂ ಇರಲಿದ್ದಾರ ಅಥವಾ ಇಲ್ಲವೇ ಎಂದು ಕಾದು ನೋಡಬೇಕಿದೆ. ಇಂಗ್ಲೆಂಡ್​ನ ಮತ್ತೊಬ್ಬ ಆಲ್​ರೌಂಡರ್​ ಲಿವಿಂಗ್​ ಸ್ಟೋನ್​ ಕೂಡ ತಂಡಕ್ಕೆ ವಾಪಸ್ಸಾಗಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ