Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಚಾರ್ಯರ ತತ್ವಾದರ್ಶಗಳು ಮೈಗೂಡಿಸಿಕೊಳ್ಳಿ - ಸಿ.ಜಿ.ಹಳ್ಳದ್

Advertisement
ಭಾಲ್ಕಿ: ಜಗದ್ಗುರು ಶ್ರೀ ರೇಣುಕಾಚಾರ್ಯರ ತತ್ವಾದರ್ಶಗಳು ಮೈಗೂಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣವಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಅಭಿಪ್ರಾಯಪಟ್ಟರು. ಪಟ್ಟಣದ ತಹಸೀಲ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರವಿವಾರ ನಡೆದ ರೇಣುಕಾಚಾರ್ಯರ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಗದ್ಗುರು ಶ್ರೀ ರೇಣುಕಾದಿ ಶಿವಶರಣರು ಮಾನವ ಜನ್ಮದ ಸಾರ್ಥಕತೆಯ ಬಗ್ಗೆ ಸಾಕಷ್ಟು ತಿಳುವಳಿಕೆ ನೀಡಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಜಗತ್ತಿಗೆ ಸಾರಿದ ಜಗದ್ಗುರು ರೇಣುಕಾಚಾರ್ಯರ ತತ್ವಾದರ್ಶಗಳು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ತಹಸೀಲ್ದಾರ ಪಲ್ಲವಿ ಬೆಳಕೀರೆ, ಜಗತ್ತಿಗೆ ಶಾಂತಿ ಸಂದೇಶ ಸಾರಿದ ಜಗದ್ಗುರು ರೇಣುಕಾಚಾರ್ಯರು ಧರ್ಮಕ್ಕಾಗಿ ಜೀವನ ಸವೆಸಿದರೆ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂಬ ಸಂದೇಶ ನಮ್ಮೆಲ್ಲರಿಗೂ ತಿಳಿಸಿದ್ದಾರೆ. ಅವರ ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯಬೇಕಿದೆ ಎಂದು ಹೇಳಿದರು. ಶ್ರೀ ಪಂಚಯ್ಯಾ ಸ್ವಾಮಿ ವಿಶೇಷ ಉಪನ್ಯಾಸ ಮಂಡಿಸಿ, ಜಗದ್ಗುರು ರೇಣುಕಾಚಾರ್ಯರು ಮತ್ತು ಸಿದ್ದಾಂತ ಶಿಖಾಮಣಿ ಧರ್ಮಗ್ರಂಥದ ಸಾರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ| ಪ್ರಭುಲಿಂಗ ಸ್ವಾಮಿ, ಭದ್ರೇಶ ಗುರಯ್ಯಾ ಸ್ವಾಮಿ, ಪುರಸಭೆ ಸದಸ್ಯ ಶಂಭುಲಿAಗ ಸ್ವಾಮಿ, ಸಿದ್ರಾಮಯ್ಯ ಸ್ವಾಮಿ, ಮಾಜಿ ಪುರಸಭೆ ಸದಸ್ಯ ಮಹಾದೇವ ಸ್ವಾಮಿ, ಶಿವಶರಣ ಸ್ವಾಮಿ, ಮನ್ಮಥ ಸ್ವಾಮಿ, ಗುರಯ್ಯಾ ಸ್ವಾಮಿ, ಶಂಭುಲಿAಗ ಕನಾಡೆ, ಸಂತೋಷ ಬಿಜಿಪಾಟೀಲ ಉಪಸ್ಥಿತರಿದ್ದರು. ಗುರಯ್ಯಾ ಸ್ವಾಮಿ ಸ್ವಾಗತಿಸಿದರು. ಭದ್ರೇಶ ಸ್ವಾಮಿ ನಿರೂಪಿಸಿದರು. ಮನ್ಮಥಸ್ವಾಮಿ ವಂದಿಸಿದರು.

ವರದಿ : ಸಂತೋಷ ಬಿಜಿ ಪಾಟೀಲ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ