Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿನ ಪೂರೈಕೆಗೆ ತುರ್ತಾಗಿ ಸ್ಪಂದಿಸಿ: ರಾಹುಲ್ ಶಿಂಧೆ 

Advertisement

ಬೆಳಗಾವಿ: ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರು ಹಾಗೂ ಮೇವು ಪೂರೈಕೆ ಕುರಿತು ಜಿಲ್ಲಾ, ತಾಲೂಕು ಮತ್ತು ಗ್ರಾಪಂಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ನೀರಿನ ಕೊರತೆ ಎದುರಾಗಿರುವಂತ ಗ್ರಾಮಗಳಲ್ಲಿ ಕಡ್ಡಾಯವಾಗಿ ಪ್ರತಿದಿನ ಅಥವಾ ಒಂದು ದಿನ ಬಿಟ್ಟು ಒಂದು ದಿನ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಜನರಿಗೆ ನೀರಿನ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಖಾಸಗಿ ಬೋರವೆಲ್ ಗಳನ್ನು ಗುರುತಿಸಿ: 
ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದಂತಹ ಗ್ರಾಮಗಳಲ್ಲಿ ಕನಿಷ್ಟ ಮೂರು ಖಾಸಗಿ ಬೋರವೆಲ್ ಗಳನ್ನು ಗುರುತಿಸಿ ಇಟ್ಟುಕೊಳ್ಳಬೇಕು. ಅಗತ್ಯಬಿದ್ದರೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ತುರ್ತಾಗಿ ನೀರು ಪೂರೈಸಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಸಿದ್ಧತೆ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು.

ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮ ಪಂಚಾಯತ ಆಡಳಿತಾಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್ ರವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.

ಈಗಾಗಲೇ ತಾಲೂಕುಮಟ್ಟದಲ್ಲಿ ಟಾಸ್ಟಪೋರ್ಸ್ ಸಭೆಗಳನ್ನು ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಕೂಡ ಮತ್ತೊಮ್ಮೆ ಸಭೆ ಕೈಗೊಂಡು ಕುಡಿಯುವ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು. ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ಪೇಂಟ್ ಮೂಲಕ ದಿನಾಂಕಗಳನ್ನು ಬರೆಯಿಸಬೇಕು ಎಂದು ಸೂಚಿಸಿದರು.

ಸಹಾಯವಾಣಿ ಕೇಂದ್ರ ಸ್ಥಾಪಿಸಿ
ಎಲ್ಲ ತಾಲೂಕುಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಹಾಯವಾಣಿ ಕೇಂದ್ರ ಸ್ಥಾಪಿಸಿ, ದೂರುಗಳು ಬಂದರೆ ತುರ್ತಾಗಿ ಕ್ರಮವಹಿಸಬೇಕು. ಸಹಾಯವಾಣಿ ಸಂಖ್ಯೆಯ ಕುರಿತು ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ತಾಲೂಕಾವಾರು ಸಹಾಯವಾಣಿ ಸಂಖ್ಯೆಗಳು: 
ಅಥಣಿ: 9480854100/ 9342399715
ಬೆಳಗಾವಿ: 9480854110/ 8971012514
ಬೈಲಹೊಂಗಲ: 9480854105/ 9900575555
ಚಿಕ್ಕೋಡಿ: 9480854115/ 9483250767
ಗೋಕಾಕ: 9480854120/ 9448640217
ಹುಕ್ಕೇರಿ: 9480854125/ 9113047775
ಕಾಗವಾಡ: 9448121173/ 9342399715
ಖಾನಾಪೂರ: 9480854130/ 9972691008
ಕಿತ್ತೂರ: 9019795554/ 9900575555
ಮೂಡಲಗಿ: 8861958929/ 9448640217
ನಿಪ್ಪಾಣಿ: 8722384524/ 9483250767
ರಾಮದುರ್ಗ: 9480854140/ 9481160120
ರಾಯಬಾಗ: 9480854135/ 9945250262
ಸವದತ್ತಿ- 9480854145/ 9900537972

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST