Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್

Advertisement
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್​​​ ಅವರನ್ನು ಅವರ ಪತ್ನಿ ಪಲ್ಲವಿಯೇ ಚಾಕುವಿನಿಂದ ಇರಿದು ಇಂದು ಬರ್ಬರವಾಗಿ ಕೊಲೆ ಮಾಡಿದ ಆರೋಪ ಪ್ರಕರಣ ಸಂಬಂಧ ಮಹತ್ವದ ಮಾಹಿತಿ ಹೊರಬಿದ್ದಿದೆ.

ಕೊಲೆ ಮಾಡಿದ ಬಳಿಕ ಐಪಿಎಸ್​ ಅಧಿಕಾರಿ ರೂಪಕ್ ದತ್ತಾ ಎಂಬುವವರ ಪತ್ನಿಗೆ ಪಲ್ಲವಿ ವಿಡಿಯೋ ಕಾಲ್​ ಮಾಡಿ ಮರ್ಡರ್​ ಬಗ್ಗೆ ವಿವರಿಸಿದ್ದಾಳೆ.

'I have finished the monster' (ನಾನು ದೈತ್ಯನನ್ನು ಮುಗಿಸಿದ್ದೇನೆ) ಎಂದು ಗಂಡನ ಕೊಂದಿರುವ ಬಗ್ಗೆ ಡೆಡ್​​​ಬಾಡಿಯನ್ನೂ ತೋರಿಸಿ ವಿಚಾರ ವಿವರವಾಗಿ ಹೇಳಿಕೊಂಡಿದ್ದಾಳೆಂದು ತಿಳಿದುಬಂದಿದೆ.

ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಆಸ್ತಿ ವಿಚಾರಕ್ಕಾಗಿಯೇ ಹತ್ಯೆ ನಡೆಸಲಾಯಿತೇ? ಎಂಬ ಅನುಮಾನಗಳು ಉದ್ಭವಿಸಿವೆ.

ನಾನೇ ನನ್ನ ಗಂಡನನ್ನು ಹತ್ಯೆ ಮಾಡಿದ್ದೀನಿ ಅಂತಾ ಪೊಲೀಸರಿಗೆ ತಿಳಿಸಿ ಆಕೆಯ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓಂ ಪ್ರಕಾಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಸೆಂಟ್​ ಜಾನ್ಸ್​​​ ಆಸ್ಪತ್ರೆಗೆ ರವಾನಿಸಲಾಗಿದೆ.

1981 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಓಂಪ್ರಕಾಶ್ ಅವರನ್ನು ಹೆಂಡತಿ ಪಲ್ಲವಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮನೆಯಲ್ಲೇ ಹತ್ಯೆಗೆ ಬಳಸಿದ್ದ ಚಾಕು ಖಾಕಿ ವಶಕ್ಕೆ ಪಡೆದಿದೆ. ಸದ್ಯ ಸೋಕೋ ಟೀಂ ಹಾಗೂ HSR ಲೇಔಟ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ