ರಾಯಚೂರು : ಅಕ್ಕಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇದೀಗ ಕೊಂಚ ನಿರಾಳತೆ ಸಿಕ್ಕಿದೆ. ಮಾರುಕಟ್ಟೆಯಲ್ಲಿ ಹೊಸ ಸೋನಾ ಮಸೂರಿ ಅಕ್ಕಿಯ ದರದಲ್ಲಿ ಭಾರೀ ಇಳಿಕೆಯಾಗಿದೆ.
ಈ ಹಿಂದೆ ಕೆಜಿಗೆ ₹80ರಿಂದ ₹90ರ ವರೆಗೆ ಮಾರಾಟವಾಗುತ್ತಿದ್ದ ಅಕ್ಕಿ ಬೆಲೆ ಇದೀಗ ₹65ರಿಂದ ₹70ಕ್ಕೆ ಇಳಿಕೆಯಾಗಿದೆ. ಅಂದರೆ, ಪ್ರತಿ ಕೆಜಿಗೆ ಸುಮಾರು ₹10ರಿಂದ ₹20ರವರೆಗೆ ದರ ಕಡಿಮೆಯಾಗಿದೆ.
ಭತ್ತದ ಪೂರೈಕೆ ಕುಸಿದಿದ್ದರಿಂದ ಕಳೆದ ಕೆಲವು ದಿನಗಳಿಂದ ಅಕ್ಕಿ ಬೆಲೆ ಏರಿಕೆಯಾಗಿತ್ತು. ಆದರೆ, ಇದೀಗ ಮಹಾರಾಷ್ಟ್ರ ಮತ್ತು ತೆಲಂಗಾಣದಿಂದ ಭತ್ತದ ಪೂರೈಕೆ ಹೆಚ್ಚಾಗಿದೆ.
ಭತ್ತದ ಕಟಾವು ಪೂರ್ಣಗೊಂಡು ಮಿಲ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬರುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ದರ ಇಳಿಕೆಯಾಗಿದೆ.
ಅಕ್ಕಿ ಬೆಲೆ ಏರಿಕೆಯಾಗಿದ್ದ ಸಂದರ್ಭದಲ್ಲಿ ಕ್ವಿಂಟಲ್‌ಗೆ ಸುಮಾರು ₹8,500 ಇದ್ದ ದರ, ಇದೀಗ ₹6,500ಕ್ಕೆ ಇಳಿಕೆಯಾಗಿದೆ. ಈ ಮೂಲಕ ಕ್ವಿಂಟಲ್ ಅಕ್ಕಿಗೆ ಬರೋಬ್ಬರಿ ₹2,000 ಕಡಿಮೆಯಾಗಿದೆ.


