Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕಿ ಹತ್ಯೆಗೈದು ಎನ್ ಕೌಂಟರ್ ನಲ್ಲಿ ಮೃತಪಟ್ಟ ರಿತೇಶಕುಮಾರ ಕುಟುಂಬಸ್ಥರ ಪತ್ತೆಗೆ ಯತ್ನ

Advertisement


ಹುಬ್ಬಳ್ಳಿನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಪೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.

ಹುಬ್ಬಳ್ಳಿಯ ಕೆಎಂಸಿಆರ್​​ಐ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿರುವ ರಿತೇಶಕುಮಾರ ಶವವನ್ನು ಗುರುತಿಸಲು ಆತನ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಂದಿಲ್ಲ. ಹೀಗಾಗಿ, ಪೊಲೀಸರು ಪೋಟೋ ಸಹಿತ ಪ್ರಕಟಣೆ ಹೊರಡಿಸಿದ್ದಾರೆ.

ಆರೋಪಿ ಹೇಗಿದ್ಧ?: ಆರೋಪಿಯು ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ 'ಓಂ ನಮಃ ಶಿವಾಯ ಜಯ ಸಂಜಯ' ಎಂಬ ಟ್ಯಾಟೂ ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕುಟುಂಬಸ್ಥರ ಪತ್ತೆಗೆ ಪೊಲೀಸರ ಹರಸಾಹಸಆರೋಪಿ ರಿತೇಶ ಪೊಲೀಸ್ ವಿಚಾರಣೆ ವೇಳೆ ತಾನು ಬಿಹಾರದ ಪಾಟ್ನಾ ನಿವಾಸಿ ಎಂದು ಹೇಳಿದ್ದ. ಆದರೆ ಇಲ್ಲಿಯವರೆಗೂ ಆತನ ಮನೆಯವರಿಗೆ ಸುದ್ದಿ ತಲುಪಿಸಲು ಆಗಿಲ್ಲ. ಕುಟುಂಬಸ್ಥರನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈತನ ಫೋಟೋ ಮತ್ತು ಕೃತ್ಯದ ಬಗ್ಗೆ ಬಿಹಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೂ ಮಾಹಿತಿ ರವಾನೆ ಮಾಡಲಾಗಿದೆ. ಅಲ್ಲಿಂದ ಏನಾದರೂ ಸುದ್ದಿ ಬರಬಹುದು ಎಂದು ಹುಬ್ಬಳ್ಳಿ ಪೊಲೀಸರು ಕಾಯುತ್ತಿದ್ದಾರೆ.

ಇದರ ಮಧ್ಯೆ ಪೊಲೀಸರ ಮತ್ತೊಂದು ತಂಡ ಬಿಹಾರದ ಪಾಟ್ನಾಗೆ ತೆರಳಿ ಆರೋಪಿಯ ವಿಳಾಸ ಪತ್ತೆ ನಡೆಸುತ್ತಿದೆ. ಇಲ್ಲಿಯೂ ಕೂಡ ಅಶೋಕನಗರ ಠಾಣೆ ಪೊಲೀಸರು ಆರೋಪಿ ಸ್ನೇಹಿತರು, ಪರಿಚಯಸ್ಥರನ್ನು ಗುರುತಿಸಿ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ.











Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ