Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕದಿನ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುತ್ತಿಲ್ಲ: ರೋಹಿತ್ ಸ್ಪಷ್ಟನೆ

Advertisement
ದುಬೈ(ಯುಎಇ): "ನಾನು ಏಕದಿನ ಕ್ರಿಕೆಟ್‌ ಮಾದರಿಯಿಂದ ನಿವೃತ್ತಿ ಪಡೆಯುತ್ತಿಲ್ಲ" ಎಂದು ಭಾನುವಾರ ರಾತ್ರಿ ಚಾಂಪಿಯನ್ಸ್‌ ಟ್ರೋಫಿ ಗೆಲುವಿನ ಬಳಿಕ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್‌ ಶರ್ಮಾ ಸ್ಪಷ್ಟಪಡಿಸಿದರು.

ಆಸ್ಟ್ರೇಲಿಯಾ ಪ್ರವಾಸದಲ್ಲಿ ವೈಫಲ್ಯ ಮತ್ತು ನಾಯಕನಾಗಿ ಉತ್ತಮವಾಗಿ ರನ್‌ ಪೇರಿಸಲು ಸಾಧ್ಯವಾಗದಿರುವ ಕಾರಣಕ್ಕೆ ಕೆಲ ಸಮಯದಿಂದ ರೋಹಿತ್ ಶರ್ಮಾ ನಿವೃತ್ತಿ ಹೊಂದಲಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು. ಆದರೆ, ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ 76 ರನ್ ಬಾರಿಸುವ ಮೂಲಕ ತನ್ನಲ್ಲಿ ಇನ್ನೂ ಕ್ರಿಕೆಟ್‌ ಕೌಶಲ ಉಳಿದಿದೆ ಎಂಬುದನ್ನು ಅವರು ಸಾಬೀತುಪಡಿಸಿದರು.

"ನಾನು ಈ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿಲ್ಲ. ಯಾವುದೇ ರೀತಿಯ ಊಹಾಪೋಹಗಳನ್ನು ಹರಡಬೇಡಿ" ಎಂದು ಶರ್ಮಾ ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟಪಡಿಸಿದರು.

"ಭವಿಷ್ಯದ ಬಗ್ಗೆ ನನ್ನಲ್ಲಿ ಯಾವುದೇ ಯೋಜನೆಗಳಿಲ್ಲ. ಏನು ಸಂಭವಿಸಬೇಕೋ ಅದು ಸಂಭವಿಸುತ್ತಿರುತ್ತದೆ" (ಜೋ ಹೊ ರಹಾ ಹೇ, ವೊ ಚಲ್ತಾ ಜಾಯೇಗಾ) ಎಂದು ಇದೇ ವೇಳೆ ಅವರು ಹೇಳಿದರು.

ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ 83 ಎಸೆತಗಳನ್ನು ಎದುರಿಸಿ 76 ರನ್‌ಗಳ ಉಪಯುಕ್ತ ಕೊಡುಗೆ ನೀಡಿದರು. "ಕಳೆದ 3-4 ಪಂದ್ಯಗಳಲ್ಲಿ ನಾನು ಯಾವ ರೀತಿಯ ಪ್ರದರ್ಶನ ನೀಡಿದ್ದೇನೋ ಅದನ್ನೇ ಇವತ್ತೂ ಮುಂದುವರೆಸಿದ್ದೇನೆ. ಬ್ಯಾಟಿಂಗ್‌ನಲ್ಲಿ ವಿಭಿನ್ನವಾದುದೇನೂ ಮಾಡಿಲ್ಲ. ಪವರ್ ಪ್ಲೇನಲ್ಲಿ ರನ್‌ ಸಂಗ್ರಹಿಸುವುದು ಎಷ್ಟು ಮುಖ್ಯ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಏಕೆಂದರೆ ಆ 10 ಓವರ್‌ಗಳ ಪವರ್ ಪ್ಲೇ ನಂತರ ಏನಾಗುತ್ತದೆ ಎಂಬುದನ್ನು ನಾವು ನೋಡಿದ್ದೇವೆ. ಫೀಲ್ಡಿಂಗ್ ವಿಸ್ತರಿಸಿಕೊಂಡಾಗ ಹಾಗು ಸ್ಪಿನ್ನರ್‌ಗಳು ಬಂದಾಗ ರನ್‌ ಗಳಿಕೆ ಕಷ್ಟವಾಗುತ್ತದೆ" ಎಂದು ವಿವರಿಸಿದರು.

"ಪಿಚ್‌ ನಿಧಾನಗತಿಯಲ್ಲಿ ಇರುವುದರಿಂದ ಆಟ ಕಷ್ಟವಾಗುತ್ತದೆ. ಹಾಗಾಗಿ ಟಾಪ್‌ ಆರ್ಡರ್‌ ಮೂಲಕ ರನ್ ಗಳಿಸುವುದು ಬಹಳ ಮುಖ್ಯವಾಗುತ್ತದೆ. ಓರ್ವ ಬ್ಯಾಟರ್‌ ಆಗಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದು ಅತೀ ಹೆಚ್ಚು ಸಮಾಧಾನ ನೀಡುವ ಅನುಭವ. ಪಂದ್ಯದಲ್ಲಿ ಜಯ ಗಳಿಸಿದರೆ, ಆ ಗೆಲುವಿಗೆ ನೀವು ಉತ್ತಮ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ ನಿಮಗದು ನೀಡುವ ಖುಷಿ ವರ್ಣಣಾತೀತ. ನಾನು 2019 ವಿಶ್ವಕಪ್‌ನಲ್ಲೂ ತಂಡಕ್ಕಾಗಿ ಬಹಳ ಕೊಡುಗೆ ನೀಡಿದ್ದೆ, ಆದರೆ, ಜಯ ನಮ್ಮದಾಗಲಿಲ್ಲ" ಎಂದರು.

ಕೆ.ಎಲ್‌.ರಾಹುಲ್ ಹೊಸ ಬ್ಯಾಟಿಂಗ್ಕ್ರಮಾಂಕದ ಕುರಿತು..: ಕೆ.ಎಲ್‌.ರಾಹುಲ್ ಅವರನ್ನು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸುವುದರ ಕುರಿತ ಚರ್ಚೆಗೆ, "ರಾಹುಲ್ ಓರ್ವ ವಿಕೆಟ್‌ ಕೀಪರ್, ಬ್ಯಾಟರ್ ಆಗಿ ತಮ್ಮ ಹೊಸ ಜವಾಬ್ದಾರಿಯನ್ನು ನಿರಂತರವಾಗಿ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ತಂಡದ ಪ್ರತಿ ಸದಸ್ಯರೂ ಅವರದೇ ಆದ ರೀತಿಯಲ್ಲಿ ಕೊಡುಗೆ ನೀಡುವುದು ಬಹಳ ಮುಖ್ಯ. ನಾವು ಕೆ.ಎಲ್.ರಾಹುಲ್ ಅವರ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾತನಾಡುವಾಗ, ಅವರು ಬ್ಯಾಟಿಂಗ್‌ನಲ್ಲಿ ತಾಳ್ಮೆಯಿಂದ ವರ್ತಿಸುವುದನ್ನೂ ಬಹಳ ಆಳವಾಗಿ ಚರ್ಚಿಸುತ್ತೇವೆ ಎಂದರು.

ಪಂದ್ಯದ ಒತ್ತಡ ಅವರೊಳಗೆ ಎಂದೂ ಸುಳಿಯುವುದಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಅಂತಹ ತಾಳ್ಮೆ, ಸಮಾಧಾನ ಬೇಕು. ಅದೇ ರೀತಿ ನಾವು ಮಧ್ಯಮ ಕ್ರಮಾಂಕದಲ್ಲಿ ಎಡಗೈ ಬ್ಯಾಟರ್ ಅಕ್ಸರ್‌ ಪಟೇಲ್‌ ಅವರನ್ನೂ ಸೂಕ್ತವಾಗಿ ಬಳಸಿಕೊಳ್ಳಬೇಕು. ಹಾಗಾಗಿ, ಇದು ನಮಗೆ ಎಲ್ಲ ರೀತಿಯಲ್ಲೂ ಸಹಕಾರಿಯಾಗಿದೆ" ಎಂದರು ವಿವರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ