Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲೆ ಮಕ್ಕಳಿಗೆ ಟ್ರ್ಯಾಕ್ ಸೂಟ್ ವಿತರಿಸಿದ ರೋಟರಿ

Advertisement
ತುರುವೇಕೆರೆ: ತಾಲ್ಲೂಕಿನ ಕೋಳಾಲ ಹಾಗೂ ಬಸವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಉಚಿತವಾಗಿ ಟ್ರ್ಯಾಕ್ ಸೂಟ್ ವಿತರಿಸಿತು.

ರೋಟರಿ ಕ್ಲಬ್ ಅಧ್ಯಕ್ಷ ವಿ.ಆರ್. ಉಮೇಶ್ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಆದರೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.

ನಗರ ಪ್ರದೇಶದ‌ ಮಕ್ಕಳಿಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆ ಕಲಿಯಲು ಹತ್ತಾರು ಸೌಲಭ್ಯ ಸೌಕರ್ಯಗಳು ಇವೆ. ಆದರೆ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುತ್ತಿದೆಯಾದರೂ ಅವರ ಪ್ರತಿಭೆ ಮತ್ತಷ್ಟು ವೃದ್ಧಿಸಲು ಅಗತ್ಯ ಸೌಲಭ್ಯ, ಮಾರ್ಗದರ್ಶನ ಬೇಕಿದೆ ಎಂದ ಅವರು, ರೋಟರಿ ಸಂಸ್ಥೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಸಹಕಾರ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳಿಗೆ ಆಟೋಟಗಳಲ್ಲಿ ಧರಿಸಲು ಅನುಕೂಲವಾಗುವಂತಹ ಟ್ರ್ಯಾಕ್ ಸೂಟ್ ವಿತರಿಸಿದ್ದು, ಮಕ್ಕಳು ಕ್ರೀಡೆಯಲ್ಲಿ ಹೆಚ್ಚಿನದನ್ನು ಸಾಧಿಸಲಿ ಎಂದು ಹಾರೈಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಅಂಜನ್ ಕುಮಾರ್, ರೋಟರಿ ಖಜಾಂಚಿ ಸುನಿಲ್, ಪದಾಧಿಕಾರಿಗಳಾದ ಎಸ್.ಎಲ್.ಎನ್. ರಾಜಣ್ಣ, ಸತ್ಯಣ್ಣ, ಇನ್ನರ್ ವೀಲ್ ಕ್ಲಬ್ ನ ಶೋಭಾ ಉಮೇಶ್, ನೇತ್ರಾ ಸಿದ್ದಲಿಂಗಸ್ವಾಮಿ, ಆನಂದಜಲ, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಶಾಲಾ‌ ಮುಖ್ಯ ಶಿಕ್ಷಕಿಯರಾದ ಪುಷ್ಪಲತಾ, ಮಮತಾ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ