ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ನ ವಾರ್ಷಿಕ ಅಖಿಲ ಭಾರತ ಪ್ರಾಂತ ಪ್ರಚಾರಕರ ಸಭೆ ಈ ವರ್ಷ ಜುಲೈ 10 ರಿಂದ 12 ರವರೆಗೆ ಬೆಳಗಾವಿಯಲ್ಲಿ ನಡೆಯಲಿದೆ.
ಆರ್.ಎಸ್.ಎಸ್. ರಾಷ್ಟ್ರೀಯ ಮಾಧ್ಯಮ ಮತ್ತು ಪ್ರಚಾರ ಉಸ್ತುವಾರಿ ಸುನಿಲ್ ಅಂಬೇಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ವಾರ್ಷಿಕ ಸಭೆಯಲ್ಲಿ ದೇಶಾದ್ಯಂತದ ಇರುವ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು, ಬಿಜೆಪಿ ಸೇರಿದಂತೆ ಆರ್.ಎಸ್.ಎಸ್. ಪ್ರೇರಿತ 32 ಸಂಘಟನೆಗಳ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.


