ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಕಾಮುಕನೊಬ್ಬನಿಗೆ ಸ್ಥಳೀಯ ಮಹಿಳೆಯರು ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿ ಧರ್ಮದೇಟು ನೀಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಜೀದ್ ನದಾಫ್ ಹಲ್ಲೆಗೊಳಗಾದ ಈತ ಸ್ಥಳೀಯ ಬಾಲಕ-ಬಾಲಕಿಯರಿಗೆ ಪುಡಿಗಾಸು ನೀಡಿ ಗುಟ್ಕಾ ತರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ.
ಅಲ್ಲದೆ, ಮಕ್ಕಳನ್ನು ಮನೆಗೆ ಕರೆಸಿಕೊಂಡು ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತಿ ಮೆರೆಯುತ್ತಿದ್ದ ಆರೋಪ ಕೇಳಿಬಂದಿದೆ.
ಇತ್ತೀಚೆಗೆ ಅಪ್ರಾಪ್ತೆ ಬಾಲಕಿಯೊಬ್ಬಳ ಜೊತೆ ಈತ ಅಸಭ್ಯವಾಗಿ ವರ್ತಿಸಲು ಯತ್ನಿಸಿದಾಗ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಆರೋಪಿಗೆ ಚಪ್ಪಲಿ ಸೇವೆ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆರೋಪಿ ಮಜೀದ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿ ದ್ದಾರೆ.


