Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರುದ್ರಣ್ಣ ಸಾವಿನ ಪ್ರಕರಣ: ನಿಷ್ಪಕ್ಷಪಾತವಾಗಿ ತನಿಖೆ ಆಗಲಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Advertisement
ಬೆಳಗಾವಿ : -ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು.

ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳಿಂದ ನಾನು ತಿಳಿದಿದ್ದೇನೆ. ಈ ಬಗ್ಗೆ ನನಗೂ ಹೆಚ್ಚೇನು ಮಾಹಿತಿ ಇಲ್ಲ. ಈ ಸಾವಿನ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಪಾತ್ರವಿಲ್ಲವೆಂದು ಅವರೇ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಏನೂ ಗೊತ್ತಿಲ್ಲ ಎಂದಿರುವ ವಿಡೀಯೋವನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಈ ಬಗ್ಗೆ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ರುದ್ರಣ್ಣವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರಿಗೆ ಪ್ರತಿಭಟನೆ ಮಾಡಬೇಡಿ ಎಂದು ಹೇಳಲು ಆಗುವುದಿಲ್ಲ. ಆದರೆ ಈ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ಸ್ವತಹ ರುದ್ರಣ್ಣನವರೇ ಹೇಳಿದ್ದಾರೆ ಈ ಬಗ್ಗೆ ಮೇಡಂ ಅವರ ಪಾತ್ರವಿಲ್ಲವೆಂದು. ಆದರೂ ವ್ಯರ್ಥ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು

ಈ ಹಿಂದಿನ ಈಶ್ವರಪ್ಪನವರ ಪ್ರಕರಣಕ್ಕೂ ಮತ್ತು ಈ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ. ಈ ಸಾವಿನ ಪ್ರಕರಣ ಆದಷ್ಟು ಬೇಗ ತನಿಖೆಯಾಗಲಿ. ನಿಷ್ಪಕ್ಷಪಾತವಾದ ತನಿಖೆ ಆಗಬೇಕೆಂದು ಪೊಲೀಸ್ ತನಿಖಾಧಿಕಾರಿಗಳಿಗೂ ಮನವಿ ಮಾಡುತ್ತೇನೆ. ಸಾವಿಗೀಡಾದ ನೌಕರನ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂದು ಹೇಳಿದರು.

ವರದಿ: ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ