LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವುದು ಶತಃಸಿದ್ಧ: ಸಚಿವ ಈಶ್ವರ ಖಂಡ್ರೆ 

Advertisement

ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರ ವಿಕೇಂದ್ರೀಕರಣದ ಪರವಾಗಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆಗೆ ಕರಡು ಮೀಸಲು ಅಧಿಸೂಚನೆ ಹೊರಡಿಸಿದೆ. 

ಬರುವ ಜನವರಿಯೊಳಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆದೇ ನಡೆಯುತ್ತವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.19ರವರೆಗೆ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 

ಸುಮಾರು 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಬಂದಿದ್ದು, ಅಧಿಕಾರಿಗಳು ನಿಯಮಾನುಸಾರ ಪರಿಶೀಲನೆ ಮಾಡುತ್ತಿದ್ದು, ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.

ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ ತರುವಾಯ ರಾಜ್ಯ ಚುನಾವಣೆ ಆಯೋಗ, ಕೇಂದ್ರ ಚುನಾವಣೆ ಆಯೋಗದಿಂದ ಮತದಾರರ ಪಟ್ಟಿ ಪಡೆದು ಅಥವಾ ತನ್ನಲ್ಲಿರುವ ಮತದಾರರ ಪಟ್ಟಿಯನ್ನೇ ಪರಿಷ್ಕರಿಸಿ ಚುನಾವಣೆ ನಡೆಸುವ ಕುರಿತಂತೆ ಕ್ರಮ ವಹಿಸಲಿದೆ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.5ರಿಂದ ಸಾರಿಗೆ ಬಸ್ ಪ್ರಯಾಣ ದರ ಏರಿಕೆ : ಸಚಿವ ಬೈರತಿ ಸುರೇಶ್ ಘೋಷಣೆರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! ಶೀಘ್ರದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ : ಡಿ.ಕೆ. ಶಿವಕುಮಾರ್ಕಿವೀಸ್ ಗೆ 192 ರನ್ ಗಳ ಟಾರ್ಗೆಟ್ ನೀಡಿದ ಭಾರತ ಪಾಕಿಸ್ತಾನ- ಒಮಾನ್ ಹಾಗೂ ಆಸ್ಟ್ರೇಲಿಯಾ- ಅಪಘಾನಿಷ್ಠಾನ್ ಪಂದ್ಯ ಇಂದು ತ್ರಿಕೋನ ಏಕದಿನ ಕ್ರಿಕೆಟ್ ಸರಣಿ: ಪಾಕಿಸ್ತಾನ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ 2-1 ರಿಂದ ಟೆಸ್ಟ್ ಸರಣಿ ಗೆದ್ದ ದ. ಆಪ್ರಿಕಾ ಪಟ್ಟಣದ ಶ್ರೀನಿಧಿ ಭಾರತ್ ಗ್ಯಾಸ್ ಗೋದಮನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಂತರಿಸುವಂತೆ ಮನವಿಎಸ್.ವಿ.ವಿ.ಕೆ.ಟ್ರಸ್ಟ್ನ ಆರ್ಯುವೇದೀಕ್ ಮೆಡಿಕಲ್ ಕಾಲೇಜ್ ಅಂತಿಮ ವಿದ್ಯಾರ್ಥಿಗಳ ವೈದ್ಯೋತ್ತಾನ ಪದವಿಪ್ರದಾನ ಕಾರ್ಯಕ್ರಮಸರ್ಕಾರದ ಕಣ್ಣಿಗೆ ಮಣ್ಣು, ಅನ್ನದಾತನ ಬದುಕಿಗೆ ಕಣ್ಣೀರು: ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ರವಿ ಪಾಟೀಲ್ ಸಿಡಿದೆದ್ದಿದ್ದು ಹೀಗೆ!