ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಮೂರು ದಿನಗಳ ಭಾರತ ಪ್ರವಾಸದ ಭಾಗವಾಗಿ ಶುಕ್ರವಾರ ದೆಹಲಿಗೆ ಬಂದಿಳಿದಿದ್ದಾರೆ. ಪುಟಿನ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವೂ ಬಂದಿದೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪುಟಿನ್, ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ಇಂಧನ ಸಹಕಾರವನ್ನು ವಿಸ್ತರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.


