Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SAD NEWS : ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ಗೆ ಬಲಿ

Advertisement
ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಬೆಂಗಳೂರಿನ ಬನಶಂಕರಿಯಲ್ಲಿನ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮಸಣದ ಹೂ, ಇನ್ಸ್ ಪೆಕ್ಟರ್ ವಿಕ್ರಂ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಂತ ಅಪರ್ಣಾ, ಆ ಬಳಿಕ ಕಿರುತೆರೆಯ ಧಾರವಾಹಿಗಳು, ರಿಯಾಲಿಟಿ ಶೋ ಗಳಲ್ಲಿ ನಿರೂಪಕಿಯಾಗಿ ತೊಡಗಿಸಿಕೊಂಡು, ಖ್ಯಾತಿಯನ್ನು ಪಡೆದಿದ್ದರು.ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು.

ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ